ಹಂಪಿ ಸ್ಮಾರಕ ಧ್ವಂಸ: ನಾಲ್ವರ ಬಂಧನ
Team Udayavani, Feb 8, 2019, 12:48 AM IST
ಬಳ್ಳಾರಿ: ಐತಿಹಾಸಿಕ ಹಂಪಿಯ ಸ್ಮಾರಕಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ಆಧರಿಸಿ ನಾಲ್ವರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ ಎಂದು ಎಸ್‌ಪಿ ಅರುಣ್ ರಂಗರಾಜನ್ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಯುಷ್ ಸಾಹು, ರಾಜಬಾಬು, ರಾಜ್ ಆರ್ಯನ್, ರಾಜೇಶ ಚೌಧರಿ ಬಂಧಿತರು. ಇವರಲ್ಲಿ ಮೂವರು ಬಿಹಾರ ಹಾಗೂ ಮತ್ತೂಬ್ಬ ಮಧ್ಯಪ್ರದೇಶ ಮೂಲದವ. ಈ ಪೈಕಿ ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್, ಮತ್ತೂಬ್ಬ ಎಚ್ಎಎಲ್ ಉದ್ಯೋಗಿ, ಇನ್ನೊಬ್ಬ ಆರ್‌ಆರ್‌ಬಿ ಪರೀಕ್ಷೆ ಬರೆಯಲು ಬಳ್ಳಾರಿಗೆ ಆಗಮಿಸಿದ್ದ ಹಾಗೂ ಮತ್ತೂಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಿದರು.
ಹಂಪಿ ವೀಕ್ಷಣೆಗೆಂದು ಇತ್ತೀಚೆಗೆ ಐವರ ಗುಂಪು ಆಗಮಿಸಿತ್ತು. ಇವರಲ್ಲಿ ಒಬ್ಬ ಸ್ಮಾರಕಗಳನ್ನು ವೀಕ್ಷಿಸಲೆಂದು ಹಂಪಿಯಲ್ಲೇ ಸುತ್ತಾಡಿದ್ದಾನೆ. ಉಳಿದ ನಾಲ್ವರಲ್ಲಿ ಮೂವರು ಕಂಬಗಳನ್ನು ಉರುಳಿಸಿದರೆ, ಮತ್ತೂಬ್ಬ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ವಿಡಿಯೋ ಆಧರಿಸಿ ತನಿಖೆ ನಡೆಸಿದಾಗ ಬೆಂಗಳೂರಿನಲ್ಲಿ ಇಬ್ಬರನ್ನು, ಹೈದ್ರಾಬಾದ್‌ನಲ್ಲಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ಮಧ್ಯಪ್ರದೇಶ ಮೂಲದ ಆರೋಪಿಗೆ ತಾನಾಗಿಯೇ ಶರಣಾಗುತ್ತೀಯಾ? ಅಥವಾ ನಾವಾಗಿ ಬಂಧಿಸಬೇಕಾ ಎಂಬ ಸಂದೇಶವನ್ನು ಮೊದಲು ಕಳುಹಿಸಲಾಗಿತ್ತು. ಬಳಿಕ ಆತನನ್ನೂ ಬಂಧಿಸಲಾಯಿತು. ತನಿಖೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.