ಹಂಪಿ ಸ್ಮಾರಕ ಧ್ವಂಸ: ಪೊಲೀಸರಿಂದ ತನಿಖೆ
Team Udayavani, Feb 3, 2019, 1:19 AM IST
ಹೊಸಪೇಟೆ: ಐತಿಹಾಸಿಕ ಹಂಪಿಯಲ್ಲಿ ಕೆಲವು ಕಿಡಿಗೇಡಿಗಳು ಸ್ಮಾರಕ ಧ್ವಂಸಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಶನಿವಾರ ಎಸ್ಪಿ ಅರುಣ್ ರಂಗರಾಜನ್ ಭೇಟಿ ನೀಡಿ ಧ್ವಂಸಗೊಂಡ ಸ್ಮಾರಕಗಳ ಪರಿಶೀಲನೆ ನಡೆಸಿದರು.
ಹಂಪಿಯ ಗಜಶಾಲೆಯ ಹಿಂಭಾಗದ ವಿಷ್ಣು ದೇವಾಲಯದ ಎಡಭಾಗದ ಮಂಟಪದಲ್ಲಿ ಒಟ್ಟು 14 ಕಂಬಗಳನ್ನು ಧ್ವಂಸಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಅರುಣ್ ರಂಗರಾಜನ್, ಕೇಂದ್ರ ಪುರಾತತ್ವ ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ನಾಲ್ವರು ಭಾಗಿಯಾಗಿದ್ದು, ತನಿಖೆ ಮುಂದುವರಿದಿದೆ. ಆರು ತಿಂಗಳ ಹಿಂದೆ ಈ ಘಟನೆ ನಡೆದಿರಬಹುದು. ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದರು.
ಹಂಪಿ ಉಳಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಡಿಜಿಟಲ್ ಆಯುಷ್ ಎಂಬ ಯುವಕನ ಸಂಪರ್ಕ ಸಾಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಆರೋಪಿಗಳ ಕುರಿತು ಮಹತ್ವದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಖುದ್ದು ಎಸ್ಪಿ ಅರುಣ್ ರಂಗರಾಜನ್ ಜವಾಬ್ದಾರಿ ವಹಿಸಿದ್ದು, ಅನುಮಾನಗೊಂಡವರನ್ನು ಕರೆಸಿ ವಿಚಾರಣೆ ಮಾಡುತ್ತಿದ್ದಾರೆ. ಹಂಪಿ ಸ್ಮಾರಕಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕಮಲಾಪುರ ಪಟ್ಟಣದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಹಂಪಿ ಸ್ಮಾರಕಗಳ ಮೇಲೆ ವಿಕೃತ ಸಂತೋಷ ವ್ಯಕ್ತಪಡಿಸುತ್ತಿರುವ ಕಿಡಿಗೇಡಿಗಳು ನಡೆದುಕೊಂಡ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇವರು ಸ್ಥಳೀಯರೇ ಅಥವಾ ಹೊರ ರಾಜ್ಯದವರಾ ಎಂಬ ಬಗ್ಗೆ ಈವರೆಗೂ ಪೊಲೀಸರು ಮಾಹಿತಿ ಬಿಟ್ಟು ಕೊಟ್ಟಿಲ್ಲ. ಸ್ಥಳೀಯವಾಗಿಯೂ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.