ಪೆನ್ನು-ಪೇಪರ್ ಹಿಡಿದುಕೊಳ್ಳುವ ಶಕ್ತಿ ನಿಸ್ತೇಜವಾಯಿತಾ?: ಎಚ್‌ಡಿಕೆ
Team Udayavani, Apr 7, 2024, 11:35 PM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಅಧಿಕಾರ ಇದ್ದಾಗಲೇ ಮೇಕೆದಾಟು ಮಾಡಲಿಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ಅಧಿಕಾರ ಇರುವುದು ನಿಮ್ಮ ಕೈಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಎಂದು ಕುಟುಕಿದ್ದಾರೆ.
ತಮ್ಮ “ಎಕ್ಸ್’ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೇ ಅಲ್ಲವೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ. ಆಗ ಶಿವಕುಮಾರ್ ಸಚಿವರಾಗಿದ್ದರು. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಹಾಗಾದರೆ ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು? ಮೇಕೆದಾಟು, ಮಹಾದಾಯಿ ಸಹಿತ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿ¨ªೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ? ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿ¨ªೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.