ರೈತರನ್ನು ಎದುರು ಹಾಕಿಕೊಂಡು ರಾಜಕಾರಣ ಅಸಾಧ್ಯ: ದೇವೇಗೌಡ
Team Udayavani, Sep 12, 2021, 6:08 AM IST
ಹಾಸನ: ಈ ದೇಶದಲ್ಲಿ ರೈತರು ಹಾಗೂ ವಿದ್ಯಾರ್ಥಿಗಳನ್ನು ಎದುರು ಹಾಕಿಕೊಂಡು ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಭಿಪ್ರಾಯಪಟ್ಟರು.
ಹಾಸನ ತಾಲೂಕು ಕಟ್ಟಾಯ ಹೋಬಳಿ ಗೊರೂರು ಸಮೀಪದ ಉಡುವಾರೆ ಗ್ರಾಮದಲ್ಲಿ ಶುಕ್ರವಾರ ನಡೆದ ದೇವಾಲಯಗಳ ಉದ್ಘಾಟನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ದಿಲ್ಲಿಯ ಗಡಿಯಲ್ಲಿ ಪಂಜಾಬ್ ಮತ್ತು ಹರಿಯಾಣದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಹೋರಾಟ ನಿರತ ರೈತರಿಗೆ ದೇಶದ ವಿವಿಧ ರಾಜ್ಯಗಳ ರೈತರು, ರೈತ ಸಂಘಟನೆಗಳ ಬೆಂಬಲವೂ ಇದೆ. ಹಾಗಾಗಿಯೇ ಹಲವು ತಿಂಗಳು ಕಳೆದರೂ ರೈತರ ಪ್ರತಿಭಟನೆ ನಿಂತಿಲ್ಲ ಎಂದರು.
ದೇಶದಲ್ಲಿ ರೈತರು, ವಿದ್ಯಾರ್ಥಿಗಳನ್ನು ಎದುರು ಹಾಕಿಕೊಂಡು ರಾಜಕಾರಣ ಮಾಡು ವುದು ಕಷ್ಟ ಎಂದು ಪ್ರಧಾನಿ ಮೋದಿಗೂ ಹೇಳಿದ್ದೆ. ರೈತರೊಂದಿಗೆ ಚರ್ಚೆ ಮಾಡಿ, ನಾನೂ ಪಾಲ್ಗೊಳ್ಳುತ್ತೇನೆ. ರೈತರ ಪ್ರತಿಭಟನೆ ಹೆಚ್ಚು ದಿನ ಮುಂದುವರಿ ಯಲು ಅವಕಾಶ ಕೊಡಬೇಡಿ ಎಂದು ಸಲಹೆ ನೀಡಿದ್ದೆ. ಆದರೆ ಪ್ರಧಾನಿಯವರು ಈವರೆಗೂ ಸ್ಪಂದಿಸಿಲ್ಲ ಎಂದು ವಿಷಾದಿಸಿದರು.
ದೇಶದಲ್ಲಿ ಬಡತನ:
ಶ್ರೀಮಂತಿಕೆಯ ನಡುವಿನ ಅಂತರ ಹೆಚ್ಚುತ್ತಲೇ ಹೋಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಬಡವರ ಸಂಖ್ಯೆ ಹೆಚ್ಚಿದ್ದರೆ, ಸಿರಿವಂತರ ಸಂಖ್ಯೆ ಕಡಿಮೆ ಇದೆ. ಆದರೆ ನಗರ ಪ್ರದೇಶಗಳು ಶ್ರೀಮಂತರಿಗೆ ಸೀಮಿತವಾಗಿವೆ ಎಂಬ ಪರಿಸ್ಥಿತಿ ಇದೆ ಎಂದರು.
ರೈತರು ಮತ್ತು ಗ್ರಾಮೀಣ ಪ್ರದೇಶದ ಜನರ ಪರವಾದ ನಿಲುವು ಹೊಂದಿರುವ ಜೆಡಿಎಸ್ ಪ್ರಾದೇಶಿಕ ಪಕ್ಷ. ಈ ಪಕ್ಷದಿಂದ ನಮಗೆ ಅಡಚಣೆ ಇದೆ ಎಂದು ಎರಡು ರಾಷ್ಟ್ರೀಯ ಪಕ್ಷಗಳು ಭಾವಿಸಿವೆ. ಜೆಡಿಎಸ್ ಈ ರಾಜ್ಯದಲ್ಲಿ ಇರಬಾರದು ಎಂಬ ಮನೋಭಾವನೆಯಿಂದ ಎರಡು ರಾಷ್ಟ್ರೀಯ ಪಕ್ಷಗಳೂ ರಾಜಕಾರಣ ಮಾಡಿಕೊಂಡು ಬರುತ್ತಿವೆ. ಆದರೆ ಈ ರಾಜ್ಯದ ರೈತರು ಜೆಡಿಎಸ್ ಅನ್ನು ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಪಕ್ಷ ಸಂಘಟನೆಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಹಮ್ಮಿಕೊಳ್ಳುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.