ಗೌಡರದ್ದು ನೀಚ ರಾಜಕಾರಣ, ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಕೊಟ್ಟಿದ್ದೇ ಅಪ್ಪ-ಮಕ್ಕಳು; ಸಿದ್ದು
Team Udayavani, Aug 23, 2019, 12:54 PM IST
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸರಕಾರ ಉಳಿಸಲು ಹಾಗೂ ಬಿಜೆಪಿ ಅಧಿಕಾರಕ್ಕೆ ಏರಲು ತಡೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. ಆದರೆ ಸರಕಾರ ಉರುಳಿಸಲು ಅಪ್ಪ, ಮಕ್ಕಳೇ ಕಾರಣ. ಬಿಜೆಪಿ ಅಧಿಕಾರದ ಗದ್ದುಗೆ ಹಾದಿ ಸುಗಮಗೊಳಿಸಿಕೊಟ್ಟಿದ್ದೇ ದೇವೇಗೌಡರು ಮತ್ತು ಕುಮಾರಸ್ವಾಮಿ…ಹೀಗೆಂದು ನೇರವಾಗಿ ವಾಗ್ದಾಳಿ ನಡೆಸಿದ್ದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ.
ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಕ್ಕೆ ಶುಕ್ರವಾರ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡುವ ಮೂಲಕ ವಾಗ್ದಾಳಿ ನಡೆಸಿದರು.
೨೦೦೪ರಲ್ಲಿ ಜೆಡಿಎಸ್ ಪಕ್ಷ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡರೆ ನನ್ನನ್ನು ಸಿಎಂ ಮಾಡಬೇಕಾಗುತ್ತೆ ಎಂಬ ಏಕೈಕ ಕಾರಣಕ್ಕೆ ದೇವೇಗೌಡರು ನಿರಾಕರಿಸಿದ್ದರು.
ಈಗ ಪಾಪ ಸೋನಿಯಾಗಾಂಧಿಯವರ ಕಡೆ ಬೊಟ್ಟು ಮಾಡ್ತಿದ್ದಾರೆ. ಅವರು ಆಗಲೂ ನನ್ನ ಪರವಾಗಿಯೇ ಇದ್ದರು. ಇದಕ್ಕೆ ಶರದ್ ಪವಾರ್ ಸಾಕ್ಷಿ.#MyPressconference pic.twitter.com/ApiGTjlrrr— Siddaramaiah (@siddaramaiah) August 23, 2019
ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಈ ಸರಕಾರ ಪತನವಾಗುತ್ತಿರಲಿಲ್ಲ. ಈಗ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗೆ ಆರೋಪ ಮಾಡುವ ಮೂಲಕ ದೇವೇಗೌಡರು ಯಾರನ್ನು ಮೆಚ್ಚಿಸಲು ಹೊರಟಿದ್ದಾರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಅಧಿಕಾರಕ್ಕಾಗಿ ರಾತ್ರೋರಾತ್ರಿ ಬಿಜೆಪಿ ಜತೆ ಕೈಜೋಡಿಸಿದವರು ಯಾರು? 20;20 ತಿಂಗಳ ಅಧಿಕಾರದ ಹಂಚಿಕೆಯಲ್ಲಿ ದ್ರೋಹ ಎಸಗುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಮಾಡಿಕೊಟ್ಟವರೇ ದೇವೇಗೌಡರು ಮತ್ತು ಕುಮಾರಸ್ವಾಮಿ ಎಂದು ಆರೋಪಿಸಿದರು. ರಾಜಕೀಯದಲ್ಲಿ ತಮ್ಮ ಮಕ್ಕಳು, ತಮ್ಮ ಕುಟುಂಬ ಬಿಟ್ಟು ಬೇರೆ ಯಾರನ್ನೂ ಬೆಳೆಯಲು ದೇವೇಗೌಡರು ಬಿಟ್ಟಿಲ್ಲ ಎಂದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ತಾತ-ಮೊಮ್ಮಕ್ಕಳು ಕೂಡಿ ಸ್ಪರ್ಧಿಸಿದ್ದು ಕಾರಣ. ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ರಾಜ್ಯದ ಮತದಾರರು ಬೇಸತ್ತುಹೋಗಿದ್ದಾರೆ.#MyPressconference pic.twitter.com/LeITE6oXBN
— Siddaramaiah (@siddaramaiah) August 23, 2019
ನಾನು ಬಿಜೆಪಿಯನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದವನು. ಹೀಗಾಗಿಯೇ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರ ರಚನೆಗೆ ಹೈಕಮಾಂಡ್ ಸೂಚನೆಯಂತೆ ಒಪ್ಪಿಗೆ ಸೂಚಿಸಿದ್ದೆ. ಅಲ್ಲದೇ 15 ತಿಂಗಳ ಕಾಲ ಕುಮಾರಸ್ವಾಮಿಗೆ ಸಂಪೂರ್ಣ ಸಹಕಾರ ಕೂಡಾ ನೀಡಿದ್ದೆ. ನಾನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಬಿಜೆಪಿ ಅಧಿಕಾರಕ್ಕೆ ಬರಲು ಮೈತ್ರಿ ಸರಕಾರ ಬೀಳಿಸಿಲ್ಲ. ನನ್ನ ರಾಜಕೀಯ ಜೀವನದಲ್ಲಿ ನೀಚ ರಾಜಕಾರಣ ಮಾಡಿಲ್ಲ, ಅದನ್ನು ಮಾಡಿಕೊಂಡು ಬಂದವರು ದೇವೇಗೌಡರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.