‘ಬಹುದೊಡ್ಡ ತಪ್ಪು ಮಾಡಿದೆ’; ಬಿಜೆಪಿ ವಿರುದ್ಧ ಕುಮಾರಸ್ವಾಮಿ ‘ಒಕ್ಕಲಿಗ ಅಸ್ತ್ರ’
Team Udayavani, Mar 14, 2023, 10:32 AM IST
ಬೆಂಗಳೂರು: ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಮತ್ತು ಸಮಾವೇಶ ಮಾಡಿದ ಬಳಿಕ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ‘ಒಕ್ಕಲಿಗ’ ಅಸ್ತ್ರ ಪ್ರಯೋಗಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚೆಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ ಎಂದಿದ್ದಾರೆ.
ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ. ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ. ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದಿದ್ದಾರೆ.
ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ. ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತೆ ಎಂದು ತಿಳಿಯಬೇಕಿದೆ ಎಂದಿದ್ದಾರೆ.
ಇದನ್ನೂ ಓದಿ:ಅಪಾರ ಭಕ್ತಿ: ಶ್ರೀಕೃಷ್ಣ ದೇವರನ್ನೇ ಗಂಡನಾಗಿ ಸ್ವೀಕರಿಸಿ ಅದ್ಧೂರಿ ಮದುವೆಯಾದ ಯುವತಿ.!
ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ. ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು. ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು. ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದಿಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿ ಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.