ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿ ಸರಿಯಲ್ಲ: ಕುಮಾರಸ್ವಾಮಿ

Team Udayavani, Apr 17, 2022, 9:56 AM IST

ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿ ಸರಿಯಲ್ಲ: ಕುಮಾರಸ್ವಾಮಿ

ಬೆಂಗಳೂರು: ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು,ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ.  ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್‌ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ ಮತ್ತು ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು ಎಂದಿದ್ದಾರೆ.

ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ. ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್‌ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು.ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್‌ ಆಯುಕ್ತರು ಹಾಗೂ ಇಡೀ ಪೊಲೀಸ್‌ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದಿದ್ದಾರೆ.

ಇದನ್ನೂ ಓದಿ:ಭಾರತಕ್ಕೆ ಅಪಮಾನ ಮಾಡಿದ ಪ್ರಾಧ್ಯಾಪಕಿ ಏಮಿ ವ್ಯಾಕ್ಸ್‌ : ಛೀಮಾರಿ

ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರಕಾರದ ಘೋರ ವೈಫಲ್ಯ. ಬಿಗಿಕ್ರಮ ಕೈಗೊಳ್ಳುವ ಬದಲಿಗೆ ಸರಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ವಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್‌ ಮೀಡಿಯಾ ಹಿಂಸೆ ಹರಡುವ ಟೂಲ್‌ʼಕಿಟ್‌ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ.ʼ  ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್‌ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ. ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್‌ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.