ಸರಕಾರ ವಸೂಲಿಗೆ ನಿಂತಿದೆ: ಕುಮಾರಸ್ವಾಮಿ ಟೀಕಾ ಪ್ರಹಾರ


Team Udayavani, Oct 17, 2022, 4:13 PM IST

ಸರಕಾರ ವಸೂಲಿಗೆ ನಿಂತಿದೆ: ಕುಮಾರಸ್ವಾಮಿ ಟೀಕಾ ಪ್ರಹಾರ

ಬೆಂಗಳೂರು: ನಗರದ ರಸ್ತೆ ಗುಂಡಿಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಇಡೀ ರಾಜ್ಯದಲ್ಲಿನ ಎಲ್ಲ ರಸ್ತೆಗಳು ಗುಂಡಿಗಳಿಂದ ಕೂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಲುಲೂ ಮಾಲ್ ಸಮೀಪ ಮಹಿಳೆಯೊಬ್ಬರು ಬಿದ್ದು ತೀವ್ರವಾಗಿ ಗಾಯಗೊಂಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿವೆ ಎಂದು ಅವರು ಕಿಡಿಕಾರಿದರು.

ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವ ಸ್ಥಿತಿ ಇದೆ ಎಂದು ಹೇಳಿದರು.

ಇವತ್ತು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಇಂತಹ ಕಾನ್ಫರೆನ್ಸ್ ಗಳು ಎಷ್ಟೋ ಆಗಿವೆ. ಆದರೆ ಗುಂಡಿಗಳು ಮಾತ್ರ ಮುಚ್ಚಿಲ್ಲ, ಎಲ್ಲವೂ ಹಾಗೆಯೇ ಇವೆ. ಜನರ ಜೀವಗಳನ್ನು ಕಾಪಾಡುವ ಕೆಲಸವನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಮಳೆ ಬಂದಿರುವುದು ನಿಜ. ಕರ್ನಾಟಕದಲ್ಲಿ ಮಾತ್ರ ಮಳೆ ಆಗಿಲ್ಲ. ಮಳೆಗೆ ಅಗತ್ಯವಾದ ತಯಾರಿ ಈ ಸರ್ಕಾರ ಮಾಡಿಕೊಂಡಿಲ್ಲ. ಒರಿಸ್ಸಾ ಸೇರಿದಂತೆ ಅನೇಕ ಕಡೆ ಪ್ರತಿ ವರ್ಷ ಮಳೆ ಬಂದರೂ ಅಲ್ಲೆಲ್ಲಾ ಏನೂ ಅಪಾಯ ಆಗಿಲ್ಲ. ತಕ್ಷಣವೇ ಎಲ್ಲವನ್ನೂ ಅಲ್ಲಿನ ಸರ್ಕಾರದವರು ಸರಿ ಮಾಡುತ್ತಾರೆ. ಆದರೆ ನಮ್ಮಲ್ಲಿ ಅಂತಹ ಕೆಲಸ ಆಗುತ್ತಿಲ್ಲ. ಗುಂಡಿ ಮುಚ್ಚುವ ಕೆಲಸ ಮಾತ್ರ ಆಗ್ತಿಲ್ಲ, ಬದಲಿಗೆ ಗುಂಡಿಗಳ ಹೆಸರಲ್ಲಿ ಹಣ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ವಸೂಲಿ ಮಾಡುವುದೇ ಸರ್ಕಾರದ ಕೆಲಸ: ಅರಸೀಕೆರೆ ಸಮೀಪ ರಸ್ತೆ ಅಪಘಾತ ಇಡೀ ರಾಜ್ಯವನ್ನು ತಲ್ಲಣಗೊಳಿಸಿದೆ. ಅಗತ್ಯವಾದರೆ ಸರ್ಕಾರ ಇಡೀ ರಾಜ್ಯದಲ್ಲಿ ಒಂದು ಸಮೀಕ್ಷೆ ಮಾಡಿಸಲಿ. ಅದನ್ನು ಮಾಡುವ ಬದಲು ಈ ಸರ್ಕಾರ ವಸೂಲಿ ಮಾಡುವುದಕ್ಕೆ ನಿಂತಿದೆ ಎಂದು ಎಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳಲ್ಲಿ, ಹೆದ್ದಾರಿ ರಸ್ತೆಯಲ್ಲಿ ಎಎಸ್ ಐ ಸೇರಿ 3-4 ಜನ ಪೊಲೀಸರು ನಿಂತು ಜನರ ವಾಹನಗಳನ್ನು ನಿಲ್ಲಿಸಿ ವಸೂಲಿ ಮಾಡಲು ನಿಂತಿರುತ್ತಾರೆ. ಬೆಳಗ್ಗೆ ವಸೂಲಿ ಮಾಡಿ ರಾತ್ರಿ ಎಲ್ಲರೂ ಹಂಚಿಕೊಳ್ಳುತ್ತಾರೆ. ವಸೂಲಿ ಮಾಡುವುದಕ್ಕೆ ಈ ಸರ್ಕಾರ ನಿಂತಿದೆ ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ:ಸೋರುತಿದೆ ಜೆಸ್ಕಾಂ ಹನುಮಸಾಗರ ಕಚೇರಿ; ಗ್ರಾಹಕರ ಆರ್‌ಆರ್‌ ದಾಖಲೆಗಳು ಮಳೆಗೆ ನಾಶ

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಪ್ರಾರಂಭವಾಗಿ ಸೋಮವಾರ ಬೆಳಗ್ಗೆವರೆಗೆ ವ್ಯಾಪಾರ, ವಹಿವಾಟು, ಬಾರ್ ಪಬ್ಬಿಗೆ ಎಲ್ಲದ್ದಕ್ಕೂ ಸರಕಾರವೇ ಅವಕಾಶ ಕೊಟ್ಟಿದೆ. ರಾತ್ರಿ ವೇಳೆ ಕುಡಿಯೋದಕ್ಕೆ ಅವಕಾಶ ಕೊಡೋದು ಸರಕಾರವೇ. ಹೋಟೆಲ್ ಗೆ ರಾತ್ರಿ ವೇಳೆ ಅನುಮತಿ ಕೊಡುವುದು ಕೂಡ ಸರಕಾರವೇ. ಕುಡಿದ ಮೇಲೆ ಮತ್ತೆ ಹಣ ವಸೂಲಿ ಮಾಡುವುದು ಕೂಡ ಸರಕಾರವೇ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಕುಂಭಮೇಳ ನಡೆಯುತ್ತಿದೆ. ಇನ್ನು ಆ ಕಾರ್ಯಕ್ರಮ ಮುಗಿದೇ ಇಲ್ಲ. ಆದರೆ, ಕುಂಭಮೇಳಕ್ಕೆ ರಸ್ತೆಗೆ ಹಾಕಿದ್ದ ಡಾಂಬಾರು ಆಗಲೇ ಕಿತ್ತು ಹೋಗಿದೆ ಎಂದು ನನಗೆ ಮಾಹಿತಿ ಬಂದಿದೆ. ಸ್ವಾಮೀಜಿಗಳು ಎಲ್ಲರೂ ಅಲ್ಲೇ ಇದ್ದರು. ಡಾಂಬಾರು ಹಾಕಿರುವುದರಲ್ಲಿ 40% ಕಮೀಷನ್ ವ್ಯವಹಾರ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಈ ಸರಕಾರದ ಹಣೆಬರಹ ಎಂದು ಅವರು ವಾಗ್ದಾಳಿ ನಡೆಸಿದರು.

ಜನರು ಜೆಡಿಎಸ್ ಪರ: ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ ಗಾಗಿ ಪೈಪೋಟಿ‌ ಇದೆ. ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಹೀಗಾಗಿ ಆಕಾಂಕ್ಷಿಗಳನ್ನು ಕರೆದು ಮಾತನಾಡುತ್ತಿದ್ದೇವೆ. ಕ್ಷೇತ್ರಗಳಲ್ಲಿ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ಕ್ಷೇತ್ರವಾರು ಆಕಾಂಕ್ಷಿಗಳನ್ನು, ಮುಖಂಡರನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಎಲ್ಲ ಕಡೆ ಜನರ ಒಲವು ನಮ್ಮ ಪಕ್ಷದ ಕಡೆ ಇದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಅಭ್ಯರ್ಥಿಗಳಿಗೆ ಕಾರ್ಯಾಗಾರ: ಮೈಸೂರಿನಲ್ಲಿ ಇದೇ ಅ. 19-20 ರಂದು ನಮ್ಮ ಪಕ್ಷದ 126 ಅಭ್ಯರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ. ಈ ಕಾರ್ಯಾಗಾರದಲ್ಲಿ ಬಿಡದಿಯಲ್ಲಿ ನಡೆದ ಜನತಾ ಪರ್ವ ಕಾರ್ಯಾಗಾರದಲ್ಲಿ ಕೊಟ್ಟ ಟಾಸ್ಕ್ ಗಳನ್ನು ಪೂರ್ಣ ಮಾಡಿದ್ದಾರಾ? ಇಲ್ಲವಾ? ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಚುನಾವಣೆಗೆ ಹೇಗೆ ಕೆಲಸ ಮಾಡಬೇಕು ಅಂತ ಸೂಚನೆ ಕೊಡುತ್ತೇವೆ. ಬಿಜೆಪಿ-ಕಾಂಗ್ರೆಸ್ ಭರಾಟೆ ಏನೇ ಇದ್ದರೂ ಜೆಡಿಎಸ್ ಪರ ಜನರ ಭಾವನೆ ಇದೆ. ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಡಬೇಕು ಅಂತ ಜನರ ಮನಸ್ಸಿನಲ್ಲಿ ಇದೆ. ಹೀಗಾಗಿ ಈ ಕಾರ್ಯಾಗಾರ ಮಹತ್ವವಾಗಿದೆ ಎಂದು ಅವರು ಹೇಳಿದರು.

ಪಂಚರತ್ನ ರಥಯಾತ್ರೆ ಕಾರ್ಯಕ್ರಮ ನವೆಂಬರ್ 1ರಿಂದ ಪ್ರಾರಂಭ ಆಗುತ್ತದೆ. 2-3 ಹಂತದಲ್ಲಿ ರಥಯಾತ್ರೆ ಇರುತ್ತದೆ. ನವೆಂಬರ್ 1 ರಿಂದ ಫೆಬ್ರವರಿ ಅಂತ್ಯದವರೆಗೂ ನಿರಂತರವಾಗಿ ಪಂಚರತ್ನ ರಥಯಾತ್ರೆ ನಡೆಯುತ್ತದೆ ಎಂದು ತಿಳಿಸಿದರು.

ಸರ್ವೆ ರಿಪೋರ್ಟ್ ಮುಖ್ಯ ಅಲ್ಲ: ಇತರೆ ಪಕ್ಷಗಳು ನಡೆಸುತ್ತಿರುವ ಚುನಾವಣಾ ಸಮೀಕ್ಷೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೋ ಮಾಡುವ ಸರ್ವೆ ರಿಪೋರ್ಟ್ ನನಗೆ ಮುಖ್ಯ ಅಲ್ಲ. ನನ್ನ ಗುರಿ 123 ಅದಕ್ಕೆ ನಾವು ಕೆಲಸ ಮಾಡುತ್ತೇವೆ ಎಂದರು.

ನಾವು ಕೂಡಾ ಸರ್ವೆ ಮಾಡಿಸುತ್ತಿದ್ದೇವೆ. 30-40 ಕ್ಷೇತ್ರ ಸರ್ವೆ ಆಗಿದೆ. ಅಲ್ಲಿ ಕೆಲ ಗೊಂದಲ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಸರ್ವೆ ರಿಪೋರ್ಟ್ ನಮ್ಮ ಪರ ಇದೆ ಅಂತ ಮೈಮರೆಯೋದು ಬೇಡ. ಸರ್ವೆ ನೆಗೆಟಿವ್ ಇರಲಿ ಪಾಸಿಟಿವ್ ಇರಲಿ. ನಾವು ಚುನಾವಣೆ ಗೆಲ್ಲುವುದಕ್ಕೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮನೆ,ಮನೆಗೆ ಕನ್ನಡ ಬಾವುಟ: ನವೆಂಬರ್ 1 ರಂದು ನಮ್ಮ ಪಕ್ಷದಿಂದ ಮನೆಮನೆ ಮೇಲೆ ಕನ್ನಡ ಬಾವುಟ ಹಾರಿಸುವ ಸಂಕಲ್ಪ ಮಾಡಿದ್ದೇವೆ. ರಾಜ್ಯದ ಜನರು ಇದರಲ್ಲಿ ಭಾಗವಹಿಸಬೇಕು. ಬುಧವಾರ ಈ ಸಂಬಂಧ ಶಾಸಕರ ಸಭೆ ಕರೆಯಲಾಗಿದೆ. ಅದರಲ್ಲಿ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮದ ರೂಪುರೇಷೆ ಸಿದ್ದ ಮಾಡುತ್ತೇವೆ ಎಂದರು.

ಚನ್ನಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬಿಡುಗಡೆ ಮಾಡಿದ್ದ ಹಣ ಸಿ.ಪಿ. ಯೋಗೇಶ್ವರ್ ತಡೆ ಹಿಡಿಯಲು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಇಂತಹ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಅವರು ಖುಷಿಗೆ ಇಂತಹದ್ದನ್ನು ಮಾಡುತ್ತಿರುತ್ತಾರೆ. ಇದರಿಂದ ಚನ್ನಪಟ್ಟಣದಲ್ಲಿ ಮತ ಬೀಳುವುದಿಲ್ಲ. ಅವರ ಖುಷಿಗೆ ಅದನ್ನು ಮಾಡಿಕೊಳ್ಳಲಿ ಬಿಡಿ ಎಂದು ಪರೋಕ್ಷವಾಗಿ ಯೋಗೇಶ್ವರ್ ವಿರುದ್ದ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

11-highcourt

High Court: ಕ್ರಿಮಿನಲ್‌ ಕೇಸ್‌ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

10-

Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.