ಮುರುಘಾ ಶರಣರ ಬಂಧನ: ಚರ್ಚೆ ಮಾಡದಿರುವುದೇ ಸೂಕ್ತ:ಎಚ್.ಡಿ. ಕುಮಾರಸ್ವಾಮಿ
Team Udayavani, Sep 2, 2022, 11:15 PM IST
ಬೆಂಗಳೂರು: ಮುರುಘಾಮಠದ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡದಿರುವುದೇ ಸೂಕ್ತ. ಆದರೆ, ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ಪ್ರಕರಣವನ್ನು ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದು ತುಂಬಾ ಸೂಕ್ಷ¾ ವಿಚಾರ. ಮೊದಲೇ ನಮ್ಮ ರಾಜ್ಯ ಭಾವನಾತ್ಮಕ, ಆಚಾರ ವಿಚಾರಗಳಲ್ಲಿ ಬೇಯುತ್ತಿದೆ. ಇಂತಹ ವಿಚಾರಗಳಲ್ಲಿ ನಾವು ಚರ್ಚೆ ಮಾಡದೆ ಇರುವುದೇ ಸೂಕ್ತ. ಸರ್ಕಾರದ ಮಟ್ಟದಲ್ಲಿ ಏನು ತನಿಖೆ ಮಾಡಬೇಕೋ ಮಾಡಲಿ. ತನಿಖೆ ವಿಳಂಬದ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು, ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ ಎಂದು ತಿಳಿಸಿದರು.
ಸಚಿವ ಆನಂದ್ ಸಿಂಗ್ ಬೆದರಿಕೆ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಆತ್ಮಹತ್ಯೆ ಮಾಡಿಕೊಳ್ಳಲು ಹೋದರೆಂದು ಹೇಳಿ ದೂರುದಾರರ ಮೇಲೆ ಎಫ್ಐಆರ್ ದಾಖಲಾಗಿದೆಯೆಂದು ಕೇಳಿದ್ದೇನೆ.
ಬೆದರಿಕೆ ಹಾಕಿ, ಹೆದರಿಸಿ, ಪ್ರಾಣ ಬೆದರಿಕೆ ಒಡ್ಡಿದವರನ್ನು ಮಂತ್ರಿ ಎಂದು ಬಿಡಲಾಗಿದೆ. ಇದರಿಂದ ಸರ್ಕಾರದ ಆಡಳಿತ ದುರುಪಯೋಗ ಆಗಿದೆ. ಈ ವಿಚಾರವನ್ನು ತಿಳಿದುಕೊಂಡು ವಿಧಾನಸಭೆ ಕಲಾಪದಲ್ಲಿ ಮಾತನಾಡುತ್ತೇನೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.