BJP-JDS; ಮಂಡ್ಯ,ಹಾಸನ ಜೆಡಿಎಸ್ ತೆಕ್ಕೆಗೆ; ಗೌಡರ ಕುಟುಂಬದ ವ್ಯಕ್ತಿಗೆ ಬಿಜೆಪಿಯಿಂದ ಟಿಕೆಟ್?
Team Udayavani, Feb 22, 2024, 2:53 PM IST
ಬೆಂಗಳೂರು: ಬಿಜೆಪಿ ಜತೆಗೆ ಸಖ್ಯ ಬೆಳೆಸಿರುವ ಜೆಡಿಎಸ್ ಮುಂದಿನ ಲೋಕಸಭೆ ಚುನಾವಣೆಯ ಕ್ಷೇತ್ರ ಹಂಚಿಕೆಯಲ್ಲಿ ಮೊದಲ ಮೇಲುಗೈ ಸಾಧಿಸಿದೆ. ಎಚ್ ಡಿ ಕುಮಾರಸ್ವಾಮಿ ಅವರು ಅಂದುಕೊಂಡಂತೆ ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಜೆಡಿಎಸ್ ಧುರೀಣ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಸೀಟು ಹಂಚಿಕೆ ಮಾತುಕತೆಗಾಗಿ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಎಚ್ ಡಿಕೆ ಮೊದಲ ಹಂತದ ಸೀಟು ಹಂಚಿಕೆ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.
ವರದಿಯ ಪ್ರಕಾರ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಶಾ ಸಮ್ಮತಿಸಿದ್ದಾರೆ. ಉಳಿದ ಕ್ಷೇತ್ರಗಳ ಬಗ್ಗೆ ಇನ್ನಷ್ಟೇ ಅಂತಿಮವಾಗಲಿದೆ.
ಮೈತ್ರಿ ಅಂತಿಮವಾದ ಬಳಿಕ ಜೆಡಿಎಸ್ ಐದರಿಂದ ಆರು ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ ಎನ್ನಲಾಗಿತ್ತು. ಐದು ಕ್ಷೇತ್ರಗಳು ಅಂತಿಮವಾಗಿದೆ ಎನ್ನುವ ವರದಿಯೂ ಬಂದಿತ್ತು. ಹಾಸನ ಮತ್ತು ಮಂಡ್ಯ ಕ್ಷೇತ್ರಗಳ ಬಗ್ಗೆ ಎಚ್ ಡಿಕೆ ಒಲವು ಹೊಂದಿದ್ದರು. ಆದರೆ ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸ್ಥಳೀಯ ನಾಯಕರು ಇದಕ್ಕೆ ವಿರೋಧ ಹೊಂದಿದ್ದರು. ಹಾಸನದಲ್ಲಿ ಪ್ರೀತಮ್ ಗೌಡ ಅವರು ಮೈತ್ರಿ ಬಗ್ಗೆ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು.
ಗ್ರಾಮಾಂತರಕ್ಕೆ ಮಂಜುನಾಥ್?
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ದೇವೇಗೌಡರ ಕುಟುಂಬದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಟಿಕೆಟ್ ನಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.