ಮೇ 13 ರಂದು ಜೆಡಿಎಸ್ ನ ಜನತಾ ಜಲಧಾರೆ ಸಮಾರೋಪ: 4 ಲಕ್ಷ ಜನ ಸೇರುವ ನಿರೀಕ್ಷೆ; ಎಚ್ ಡಿಕೆ


Team Udayavani, May 10, 2022, 12:02 PM IST

THUMB 6

ಬೆಂಗಳೂರು: ಮೇ 13 ರಂದು ಜೆಡಿಎಸ್ ಮಹತ್ವಾಕಾಂಕ್ಷೆಯ ‘ಜನತಾ ಜಲಧಾರೆ’ ಸಮಾರೋಪ ಸಮಾರಂಭ ನಡೆಯಲಿದ್ದು, 4 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಮಂಗಳವಾರ ನೆಲಮಂಗಲ ಮೈದಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತಾ ಜಲಧಾರೆ ಕಾರ್ಯಕ್ರಮದ ವಿವರ ನೀಡಿದರು.

ನೀರಾವರಿ ಯೋಜನೆಗಳ ಅನುಷ್ಠಾನ ಮಾಡುವ ನಿಟ್ಟಿನಲ್ಲಿ  ರಾಜ್ಯದ ಪ್ರಮುಖ ನದಿಗಳ ನೀರನ್ನು ಸಂಗ್ರಹಿಸಿ ಆರಂಭ ಮಾಡಿದ ಕಾರ್ಯಕ್ರಮ ಇದಾಗುದ್ದಿ, 180 ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಸ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರದ ನಾಗರೀಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಬೆಂಗಳೂರು ಹೊರ ವಲಯದಲ್ಲಿ ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನೆಲಮಂಗಲ ಬಾವಿ ಕೆರೆ ರಸ್ತೆಯಲ್ಲಿರುವ ಮೈದಾನದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭ ಆಗಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಜನರಿಗೆ ಭರವಸೆ ಕೊಟ್ಟರೂ ನಿಗದಿತ ಅವಧಿಯಲ್ಲಿ ಕಾರ್ಯಕ್ರಮ ಮುಗಿಸಿಲ್ಲ. ಕೃಷ್ಣ ಮೇಲ್ಕಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಿ ಎಂದು ಮನವಿ ಮಾಡಿದ್ದಾರೆ. ಎತ್ತಿನ ಹೊಳೆ, ಮಹದಾಯಿ ಯೋಜನೆಗೂ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಯೋಜನೆಗಳನ್ನು ಜಾರಿಗೊಳಿಸದೆ  ಸಬೂಬು ಕೊಟ್ಟು ತಳ್ಳುತ್ತಿದ್ದಾರೆ. ರಾಜ್ಯದ ಸಂಪತ್ತು ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:ರಮೇಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ ಅವರದ್ದೂ ಸಾಲ ಬಾಕಿ ಇದೆ: ಸಚಿವ ಸೋಮಶೇಖರ

ನಮ್ಮ ರಾಜ್ಯದಲ್ಲಿ ಸರ್ಕಾರಕ್ಕೆ ಯಾವುದೂ ಅಸಾಧ್ಯ ಇಲ್ಲ. ಸರಿಯಾದ ರೀತಿಯಲ್ಲಿ ನದಿ ನೀರು ಉಪಯೋಗಿಸುವ ಸಂಕಲ್ಪ ಬರಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಸ್ವತಂತ್ರ ಸರ್ಕಾರ ಬಂದರೆ ಐದು ವರ್ಷದಲ್ಲಿ ಎಲ್ಲ ನದಿ ನೀರು ಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನೀರಿನ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಹೀಗೆ ಮುಂದುವರೆದರೆ ಬೆಂಗಳೂರು ನಗರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆಧೋರಲಿದೆ. ಅರ್ಕಾವತಿ ನದಿ ಪುನಶ್ಚೇತನ ಅಂದರು. ಅದು ನಿಂತು ಹೋಯಿತು. ಬೆಂಗಳೂರು ಹಲವು ಕೆರೆಗಳನ್ನು, ರಾಜ ಕಾಲುವೆಗಳನ್ನು  ನುಂಗಿ ಹಾಕಿದ್ದಾರೆ. ಅದನ್ನು ಸರಿಪಡಿಸಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಈ ಎಲ್ಲಾ ಕಾರಣಕ್ಕಾಗಿ ಜನತಾ ಜಲಧಾರೆ ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ಮೂರು ವರ್ಷಗಳಿಂದ ಲಘುವಾಗಿ ಚರ್ಚೆ ಮಾಡಿದ್ದಾರೆ ಅವರಿಗೆ ಉತ್ತರ ಕೊಡುವ ಕಾರ್ಯಕ್ರಮ ಇದಾಗಿದೆ‌. ಸುಮಾರು ನಾಲ್ಕರಿಂದ ಐದು ಲಕ್ಷ ಜನ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

ಗಂಗಾ ಆರತಿ ಹೈಲೈಟ್ಸ್ :

ಜನತಾ ಜಲಧಾರೆ ಕಾರ್ಯಕ್ರಮದ ಪ್ರಮುಖ ಹೈಲೆಟ್ ಗಂಗಾ ಆರತಿ. ಈ ಬಗ್ಗೆ ಮಾಹಿತಿ ನೀಡಿದ ಎಚ್ ಡಿ ಕೆ ಧರ್ಮದ ದಂಗಲ್ ಹೆಸರಿನಲ್ಲಿ ಸರ್ವ ಜನಾಂಗದ ಶಾಂತಿ ತೋಟದಲ್ಲಿ  ಅಶಾಂತಿ ಸೃಷ್ಟಿಸುತ್ತಿದ್ದಾರೆ. ನಮ್ಮ ರಾಜ್ಯ ಉತ್ತರ ಪ್ರದೇಶ ಗುಜರಾತ್ ಆಗಲು ಬಿಡಲ್ಲ. ಆದರೆ ನಮ್ಮ ಜಲಧಾರೆ ಕಾರ್ಯಕ್ರಮದಲ್ಲಿ ಸಂಜೆ 6.30 ಗೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ  20 ಜನರ ತಂಡ ವಾರಣಾಸಿಯಿಂದ ಬರುತ್ತಿದ್ದಾರೆ.ನಮ್ಮ ರಾಜ್ಯದಲ್ಲಿ ನೀರನ್ನು ಸಂಪೂರ್ಣವಾಗಿ ಬಳಕೆ ಮಾಡಲು ಗಂಗಾ ತಾಯಿ ಆಶೀರ್ವಾದ ಪಡೆಯಲು ಈ‌ ಕಾರ್ಯಕ್ರಮ ಹಮ್ಕಿಕೊಳ್ಳಲಾಗಿದೆ ಎಂದರು.

ನೆಲಮಂಗಲ ಮೈದಾನದಿಂದಲೇ 2023 ರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಬೆಂಗಳೂರಿಂದ ಹಾಸನ , ಶಿವಮೊಗ್ಗ ಕಡೆ ಪ್ರಯಾಣ ಮಾಡುವ ಜನರಿಗೆ ಸ್ವಲ್ಪ ತೊಂದರೆ ಆಗಬಹುದು. ಅದಕ್ಕೆ ಪರ್ಯಾಯ ರಸ್ತೆ ಬಳಕೆ ಮಾಡುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.