ಈಶ್ವರಪ್ಪ ಅವರನ್ನು ಬಂಧನ ಮಾಡಿ ಏನು ಮಾಡುತ್ತೀರಿ? : ಕಾಂಗ್ರೆಸ್ ಹೋರಾಟಕ್ಕೆ ಹೆಚ್ ಡಿಕೆ ಕಿಡಿ

Team Udayavani, Apr 16, 2022, 5:27 PM IST

ಈಶ್ವರಪ್ಪ ಅವರನ್ನು ಬಂಧನ ಮಾಡಿ ಏನು ಮಾಡುತ್ತೀರಿ? : ಕಾಂಗ್ರೆಸ್ ಹೋರಾಟಕ್ಕೆ ಹೆಚ್ ಡಿಕೆ ಕಿಡಿ

ವಿಜಯಪುರ: ಸಚಿವ ಸ್ಥಾನಕ್ಕೆ ರಾಜನಾಮೆ ನೀಡಿರುವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಿದ್ದೇನು. ಈಶ್ವರಪ್ಪ ಅವರನ್ನು ಬಂಧನ ಮಾಡಿ ಏನು ಮಾಡುತ್ತೀರಿ ಎಂದು ಕಾಂಗ್ರೆಸ್ ಹೋರಾಟಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಶ್ವರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಶನಿವಾರ ಜಿಲ್ಲೆಯ ಆಲಮಟ್ಟಿಯ ಕೃಷ್ಣಾ ತೀರದಲ್ಲಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ರಾಜೀನಾಮೆ ಆಯ್ತು, ಈಗ ಬಂಧನ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಹೋರಾಟಕ್ಕೆ ಇಳಿದಿದೆ. ರಾಜಕೀಯವಾಗಿ ವಿಷಯವೇ ಇಲ್ಲದೆ ಈಶ್ವರಪ್ಪ ಅವರನ್ನು ಗುರಿಯಾಗಿಸಿಕೊಂಡು ಬೀದಿಗೆ ಇಳಿದಿದ್ದಾರೆ ಎಂದು ಟೀಕಿಸಿದರು.

ಇಷ್ಟಕ್ಕೂ ಕುರುಬ ಸಮಾಜಕ್ಕೆ ಸೇರಿದ್ದ ಕಲ್ಲಪ್ಪ ಹಂಡಿಬಾಗ ಎಂಬ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಾ, ಅಂದಿನ ಗೃಹಮಂತ್ರಿ ಬಂಧನವಾಗಿತ್ತಾ. ಸರ್ಕಾರದ ಅಂದಿನ ನಡವಳಿಕೆಯಿಂದಲೇ ಕಲ್ಲಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ನೀವೇನು ಮಾಡಿದಿರಿ ಎಂದು ಕಾಂಗ್ರೆಸ್ ನಾಯಕರನ್ನು ಕುಟುಕಿದರು.

ಇದನ್ನೂ ಓದಿ:ಭಾರತ ನಿರುದ್ಯೋಗ ಸಮಸ್ಯೆಯನ್ನೇ ಎದುರಿಸಬೇಕಾಗಿಲ್ಲ..ಆದರೆ ನಮ್ಮ ಜನರು: ಪ್ರಧಾನಿ ಹೇಳಿದ್ದೇನು?

ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಜಕೀಯವಾಗಿ ವಿಷಯಗಳೇ ಇಲ್ಲ. ನಿಮ್ಮ ಕಾಲದಲ್ಲಿ ಏನೇನು ಆಯ್ತು ಎಂದು ಹೇಳಿ. ನಿಮ್ಮ ಈ ನಡವಳಿಕೆಯಿಂದ ನಿಮಗೆ ಲಾಭವಾಗದು. ಸಂತೋಷ್ ಆತ್ಮಹತ್ಯೆ ವಿಷಯದಲ್ಲಿ ಸತ್ಯಾಸತ್ಯತೆ ಹೊರ ಬರಲಿ, ಇದಕ್ಕಾಗಿ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮೊದಲ ದಿನವೇ ಹೇಳಿದ್ದೇನೆ. ಸತ್ಯಾಸತ್ಯತೆ ಜನರ ಮುಂದಿಡುವುದು ಸರ್ಕಾರ ಕರ್ತವ್ಯ ಎಂದು ಅಂದೇ ಹೇಳಿದ್ದೇನೆ. ಇದರ ಹಿಂದೆ ಮಹಾನಾಯಕ ಇದ್ದಾರೋ, ಖಳನಾಯಕ ಇದ್ದಾರೋ ನನಗಂತೂ ಗೊತ್ತಿಲ್ಲ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಮತೀಯ ಗಲಭೇ ಆದಾಗ ಮನೆ ಸೇರಿಕೊಂಡಿದ್ದ ಕಾಂಗ್ರೆಸ್ ನಾಯಕರು, ಈಶ್ವರಪ್ಪ ಅವರ ಭ್ರಷ್ಟಾಚಾರದ ವಿಷಯವನ್ನು ಮುಂದಿಟ್ಟುಕೊಂಡು ರಾಜೀನಾಮೆ ಆಯ್ತು, ಈಗ ಬಂಧನ ಎಂದು ಪಟ್ಟು ಹಿಡಿದಿರುವುದು ಕಾಂಗ್ರೆಸ್ ಮತ ಪ್ರಹಸನ ಎಂದು ಟೀಕಿಸಿದರು.

ಧರ್ಮಗಳ ಮಧ್ಯೆ ಒಡಕಿನ ಬೆಳವಣಿಗೆ ನಡೆದಾಗ ಮೌನವಾಗಿದ್ದು, ಮನೆ ಸೇರಿಕೊಂಡಿದ್ದ ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾಗಿದ್ದಾಗ ಕಾಂಗ್ರೆಸ್ ನಾಯಕರ ಒಬ್ಬರ ಉಸಿರೂ ಇರಲಿಲ್ಲ, ಅಂದೇಕೆ ಕಾಂಗ್ರೆಸ್ ನಾಯಕರು ಮೌನವಾಗಿದ್ದೇಕೆ, ರಾಜ್ಯದ ಜನರ ಬಗ್ಗೆ ಕಾಳಜಿ ಇದ್ದವರು ಆಗೇಕೆ ಬೀದಿಗೆ ಇಳಿಯಲಿಲ್ಲ. ಜನತೆಯ ಸಮಸ್ಯೆ ಬಗ್ಗೆ ಇವರಿಗೆ ಕಾಳಜಿ ಇಲ್ಲ. ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್, ಬಿಜೆಪಿ ಎರಡೂ ರಾಜಕೀಯ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಜನತೆ ಎಷ್ಟು ದಿನ ಇದನ್ನು ಸಹಿಸುವುದು. ಅಂತಿಮವಾದ ತೀರ್ಮಾನ ಮಾಡಲು ಜನತೆಯೂ ನಿರ್ಧರಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.