ಹೌದು. ನಾನು ಲಕ್ಕಿಡಿಪ್‌ ಸಿಎಂ,ಏನೀಗ?: ಬಿಜೆಪಿ,ಕುಟುಂಬ ರಾಜಕಾರಣ ವಿರುದ್ಧ HDK ಸರಣಿ ಟ್ವೀಟ್


Team Udayavani, Jul 6, 2022, 11:41 AM IST

ಹೌದು. ನಾನು ಲಕ್ಕಿಡಿಪ್‌ ಸಿಎಂ,ಏನೀಗ?: ಬಿಜೆಪಿ,ಕುಟುಂಬ ರಾಜಕಾರಣ ವಿರುದ್ಧ HDK ಸರಣಿ ಟ್ವೀಟ್

ಬೆಂಗಳೂರು: ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಗಳನ್ನು ಮಾಡಿ ಬಿಜೆಪಿ ಹಾಗೂ ಕುಟುಂಬ ರಾಜಕಾರಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದಿದ್ದಾರೆ.

ಲಕ್ಕಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ಕುಡಿದು ಪತ್ನಿಯೊಂದಿಗೆ ಜಗಳ; ತಪ್ಪೇ ಮಾಡದ ಮೂರು ವರ್ಷದ ಮಗಳನ್ನೇ ಕೊಂದ ಪಾಪಿ ತಂದೆ

ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!! ಎಂದು ವ್ಯಂಗ್ಯವಾಡಿದ್ದಾರೆ.

ʼಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು ಹೇಳಿದ್ದಾರೆ.

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;

1.ಯಡಿಯೂರಪ್ಪ & ಸನ್ಸ್‌

2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ

3.ಅಶೋಕ್-ರವಿ

4.ವಿ.ಸೋಮಣ್ಣ-ಅರುಣ್‌ ಸೋಮಣ್ಣ

5.ಅರವಿಂದ ಲಿಂಬಾಳಿ-ರಘು

6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌

7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌

8.ಮುರುಗೇಶ ನಿರಾಣಿ-ಹನುಮಂತ ನಿರಾಣಿ

9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್

10.ಜಾರಕಿಹೊಳಿ ಕುಟುಂಬ

11.ಕತ್ತಿ ಕುಟುಂಬ

12.ಜೊಲ್ಲೆ ಕುಟುಂಬ

13.ಅಂಗಡಿ ಕುಟುಂಬ

14.ಉದಾಸಿ ಕುಟುಂಬ

15.ಶ್ರೀರಾಮುಲು ಕುಟುಂಬ

16.ರೆಡ್ಡಿ ಬ್ರದರ್ಸ್‌

ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.