HD Revanna ಕೋರ್ಟ್ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ
ಜೈಲಿನಿಂದ ಹೊರಬಂದ ಬಳಿಕ ಪ್ರತಿಕ್ರಿಯೆ, ದೇಗುಲ ಭೇಟಿ
Team Udayavani, May 15, 2024, 12:38 AM IST
ಬೆಂಗಳೂರು: “ನನಗೆ ನ್ಯಾಯಾಂಗದ ಮೇಲೆ ಅಪಾರ ಗೌರವ ಇದೆ. ಈ ಆಪಾದನೆಯಿಂದ ಹೊರಬರುತ್ತೇನೆಂಬ ನಂಬಿಕೆಯೂ ಇದೆ’.
– ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ಬಳಿಕ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪ್ರತಿಕ್ರಿಯೆ ಇದು.
ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಅನಂತರ ಅವರು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿ, ತಂದೆ-ತಾಯಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿ, “11 ದಿನಗಳಿಂದ ನ್ಯಾಯಾಲಯದ ಆದೇಶಗಳನ್ನು ಪಾಲಿಸಿದ್ದೇನೆ. ಮುಂದೆಯೂ ಪಾಲಿಸುತ್ತೇನೆ. ಹೆಚ್ಚಿಗೆ ಏನನ್ನೂ ಹೇಳಲು ಇಷ್ಟಪಡುವುದಿಲ್ಲ. ಈ ಆಪಾದನೆಯಿಂದ ನಿರ್ದೋಷಿಯಾಗಿ ಹೊರಬರುತ್ತೇನೆ ಎಂಬ ನಂಬಿಕೆ ಇದೆ’ ಎಂದಷ್ಟೇ ಹೇಳಿದರು.
“ಜೈಲಿಗೆ ಹೋಗುವ ಮುನ್ನ ಇದು ರಾಜಕೀಯ ಷಡ್ಯಂತ್ರ ಎಂದಿದ್ದಿರಿ’ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿ ತೆರಳಿದರು. ಬಳಿಕ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಅರ್ಚನೆ ಮಾಡಿಸಿ ರಾತ್ರಿ ಬೆಂಗಳೂರಿಗೆ ಮರಳಿದರು.
ಇದಕ್ಕೆ ಮುನ್ನ ರೇವಣ್ಣ ಅವರು ಜೆ.ಪಿ. ನಗರದ ಶ್ರೀಲಕ್ಷ್ಮೀ ವೇಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅಲ್ಲಿಂದ ಬಸವನಗುಡಿಯ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ದೇವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು.
ಭಾವುಕರಾದ ಕುಟುಂಬಸ್ಥರು, ಕಾರ್ಯಕರ್ತರು
ಇದಕ್ಕೆ ಮುನ್ನ ದೇವೇಗೌಡರ ನಿವಾಸಕ್ಕೆ ರೇವಣ್ಣ ಆಗಮಿಸಿದಾಗ ಇಡೀ ಮನೆಯಲ್ಲಿ ಭಾವುಕತೆ ಆವರಿಸಿತ್ತು. ಎಲ್ಲರ ಕಣ್ಣಾಲಿಗಳಲ್ಲೂ ನೀರು ಜಿನುಗುತ್ತಿತ್ತು. ಕುಟುಂಬದವರೊಂದಿಗೆ ಸ್ವಲ್ಪ ಕಾಲ ಆತ್ಮೀಯ ಕ್ಷಣಗಳನ್ನು ಕಳೆದ ರೇವಣ್ಣ ಜತೆಯಾಗಿ ಊಟ ಮಾಡಿದರು.
ತಮ್ಮ ಭೇಟಿಗೆ ಆಗಮಿಸಿದ ಪಕ್ಷದ ಶಾಸಕರು, ಮುಖಂಡರ ಜತೆಗೆ ಸ್ವಲ್ಪ ಕಾಲ ಮಾತುಕತೆ ನಡೆಸಿದ ಅನಂತರ ಮನೆಯಿಂದ ಹೊರಬಂದರು. ಹೊರಗೆ ನೆರೆದಿದ್ದ ಕಾರ್ಯಕರ್ತರನ್ನು ಕಂಡು ಭಾವುಕರಾದರು. ಕಣ್ಣೀರಿಟ್ಟ ರೇವಣ್ಣ ಅವರಿಗೆ ಧೈರ್ಯ ಹೇಳಿದ ಕಾರ್ಯಕರ್ತರು, ರೇವಣ್ಣ ಪರ ಘೋಷಣೆಗಳನ್ನು ಕೂಗಿದರಲ್ಲದೆ ರಾಜ್ಯ ಸರಕಾರ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.