B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

ಜಮೀರ್‌ ವಿರುದ್ಧ ಶಿಸ್ತು ಕ್ರಮಕ್ಕೆ ಕೆಪಿಸಿಸಿ ಉಪಾಧ್ಯಕ್ಷ‌ ಒತ್ತಾಯ

Team Udayavani, Nov 16, 2024, 6:54 AM IST

1-rewww

ಮಂಡ್ಯ: “ಕಾಲಿಯಾ ಕುಮಾರಸ್ವಾಮಿ’ ಎಂಬ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಹೇಳಿಕೆಯ ಹಿಂದೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್‌ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಗಂಭೀರ ಆರೋಪ ಮಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಮೀರ್‌ ಹೇಳಿಕೆ ಹಿಂದೆ ಕುಮಾರಸ್ವಾಮಿಯವರೇ ಇರಬೇಕು ಎನಿಸುತ್ತಿದೆ. ಕುಮಾರಣ್ಣ, ಜಮೀರ್‌ ಇಬ್ಬರೂ ಚೆನ್ನಾಗಿದ್ದಾರೆ. ಕುಮಾರಸ್ವಾಮಿ ಅವರಿಗೆ ಈ ರೀತಿ ಹೇಳಿಸಿ ಅಭ್ಯಾಸವಾಗಿದೆ. ಅದನ್ನೇ ಜಮೀರ್‌ ಅವರಿಂದ ಆ ಮಾತು ಹೇಳಿಸಿರಬಹುದು ಎಂಬುದು ನನ್ನ ಅಭಿಪ್ರಾಯ. ಹಿಂದೆಯೂ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದರು. ಏನೇ ಇರಲಿ ಸಚಿವ ಜಮೀರ್‌ ಅಹಮದ್‌ ಇಂತಹ ಬೇಜವಾಬ್ದಾರಿ ಮಾತು ಆಡಬಾರದಿತ್ತು ಎಂದರು.

50 ಕೋಟಿ ಆಫರ್‌ ನನಗೇನೂ ಬಂದಿಲ್ಲ
ತಲಾ 50 ಕೋಟಿ ರೂ.ಗೆ ಕಾಂಗ್ರೆಸ್‌ನ 50 ಶಾಸಕರ ಖರೀದಿಗೆ ಬಿಜೆಪಿಯವರು ಪ್ಲ್ರಾನ್‌ ಮಾಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಶ್ರೀರಂಗಪಟ್ಟಣ ಕಾಂಗ್ರೆಸ್‌ ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಬಿಜೆಪಿಯವರು ನಮಗೇನೂ ಆಫರ್‌ ಕೊಟ್ಟಿಲ್ಲ. ಅದರಲ್ಲಿ ನಾನಂತೂ ಇಲ್ಲ ಎಂದು ಹೇಳಿದರು. ಬಿಜೆಪಿ-ಜೆಡಿಎಸ್‌ ಪಕ್ಷದವರೇ ಉಪಚುನಾವಣೆ ಅನಂತರ ಕಾಂಗ್ರೆಸ್‌ ಸರಕಾರ ಉಳಿಯಲ್ಲ ಎನ್ನುತ್ತಿದ್ದರು. ಅದರ ವಿಚಾರವಾಗಿಯೇ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರಿಗೆ ಸರಕಾರ ಬೀಳಿಸಿ ಅಭ್ಯಾಸವಾಗಿದೆ. ಸರಕಾರ ಕೆಡವಲು ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಅದರಲ್ಲಿ ಅವರು ಯಶಸ್ವಿಯಾಗೋದಿಲ್ಲ. ಬಿಜೆಪಿ-ಜೆಡಿಎಸ್‌ ರಾಷ್ಟ್ರೀಯ, ರಾಜ್ಯ ನಾಯಕರೇ ಸರಕಾರ ಉಳಿಯಲ್ಲ ಎನ್ನುತ್ತಿದ್ದಾರೆ. ಕಾದು ನೋಡೋಣ ಎಂದರು.

ಶಿಸ್ತು ಕ್ರಮಕ್ಕೆ ಕೆಪಿಸಿಸಿ ಉಪಾಧ್ಯಕ್ಷ‌ ಒತ್ತಾಯ

ಜಮೀರ್‌ ಅಹ್ಮದ್‌ ಖಾನ್‌ ನೀಡಿದ ಹೇಳಿಕೆಗಳು ಹಾಗೂ ಸೃಷ್ಟಿಸಿದ ವಿವಾದಗಳಿಂದ ಪಕ್ಷದ ಮೇಲೆ ದುಷ್ಪರಿಣಾಮ ಬೀರಿರುವುದು ಸ್ಪಷ್ಟವಾಗಿರುವುದರಿಂದ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಎ.ಆರ್‌.ಎಂ. ಹುಸೇನ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಮೀರ್‌ ಹೇಳಿಕೆಯಿಂದಾಗಿಯೇ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಅದರ ಪರಿಣಾಮವನ್ನು ಜಮೀರ್‌ ಅವರೇ ಎದುರಿಸಬೇಕಾಗುತ್ತದೆ. ರಾಜಕೀಯ ಬೌದ್ಧಿಕತೆ ಕಳೆದುಕೊಂಡಿರುವ ಇಂತಹವರನ್ನು ಪಕ್ಷ ಹಾಗೂ ಸರಕಾರ ಮುಖ್ಯವಾಹಿನಿಯಲ್ಲಿ ಬಿಂಬಿಸುವುದನ್ನು ಕೈಬಿಟ್ಟರೆ ಕ್ಷೇಮ ಎಂದು ಹೇಳಿದ್ದಾರೆ. ಸಚಿವ ಸ್ಥಾನದ ಘನತೆ ಮತ್ತು ಹಕ್ಕುಬಾಧ್ಯತೆಯ ಜವಾಬ್ದಾರಿ ಅರಿತುಕೊಳ್ಳದ ಜಮೀರ್‌ ಅಹ್ಮದ್‌ ಅವರಿಂದ ಪಕ್ಷಕ್ಕಾಗಲೀ, ಸರ್ಕಾರಕ್ಕಾಗಲೀ ಯಾವುದೇ ಲಾಭವಾಗದೇ ಕೇವಲ ನಷ್ಟವಾಗುತ್ತಿದೆ ಎಂಬುದನ್ನು ಪಕ್ಷದ ಮುಖಂಡರು ಮನದಟ್ಟು ಮಾಡಿಕೊಳ್ಳಬೇಕು, ಇವರ ನಡವಳಿಕೆಗೆ ತಕ್ಷಣವೇ ಲಗಾಮು ಹಾಕಬೇಕೆಂದು ಆಗ್ರಹಿಸಿರುವ ಹುಸೇನ್‌ ಅವರು, ಇನ್ಮುಂದೆ ಯಾವುದೇ ರೀತಿಯ ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡದಂತೆ ಎಚ್ಚರಿಕೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಹೇಳಿಕೆ ವೈಯಕ್ತಿಕ: ಲಾಡ್‌
ಜಮೀರ್‌ ಹೇಳಿಕೆಯಿಂದ ಹಿನ್ನಡೆಯಾಗಿದೆ ಎಂಬ ಸಿ.ಪಿ. ಯೋಗೇಶ್ವರ್‌ ಹೇಳಿಕೆ ವೈಯಕ್ತಿಕ. ಆ ಹೇಳಿಕೆ ಬಗ್ಗೆ ನನ್ನ ಸಹಮತವಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವುದರಲ್ಲಿ ಅನುಮಾನವಿಲ್ಲ. ಜನ ಆರಿಸಿದ ಸರಕಾರ ಉರುಳಿಸುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ಶಾಸಕರು ಯಾವುದೇ ಆಮಿಷಕ್ಕೆ ಒಳಗಾಗಲಿಲ್ಲ. ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷ ಒಡ್ಡಿರುವ ಕುರಿತು ಮುಖ್ಯಮಂತ್ರಿಗಳು ಹೇಳಿರುವುದು ಸತ್ಯ ಎಂದು ಹೇಳಿದರು.

ಟಾಪ್ ನ್ಯೂಸ್

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.