ಬಡಯುವಕರ ನೆತ್ತರಿನ ಮೇಲೆ ಸುಖದಸೌಧ ಕಟ್ಟುತ್ತಿರುವ ಬಿಜೆಪಿಗೆ ಪಾಪಪ್ರಜ್ಞೆ ಇಲ್ಲ:ಕುಮಾರಸ್ವಾಮಿ
Team Udayavani, Jul 30, 2022, 1:33 PM IST
ಬೆಂಗಳೂರು: ಕಾರ್ಯಕರ್ತರನ್ನು ‘ಮತೀಯ ವ್ಯಸನಿ’ಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ ಬಿಜೆಪಿಯ ಅಸಲಿ ಮುಖವನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಳಚಿಟ್ಟಿದ್ದಾರೆ. ಇದು ಅತ್ಯಂತ ಹೇಯ ಮತ್ತು ಪಾತಕ, ರಾಕ್ಷಸೀ ರಾಜಕಾರಣದ ಪರಾಕಾಷ್ಠೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ಕಂಡವರ ಮಕ್ಕಳ ಕಗ್ಗೊಲೆ, ಬಡ ಯುವಕರ ನೆತ್ತರಿನ ಮೇಲೆ ಸುಖದಸೌಧ ಕಟ್ಟುತ್ತಿರುವ ಬಿಜೆಪಿಗೆ ಪಾಪಪ್ರಜ್ಞೆ ಇಲ್ಲ. ಸಹಪಾಠಿಯ ಕೊಲೆಗೆ ಪ್ರತಿಯಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರೆ, ಅವರ ಆತ್ಮಸ್ಥೈರ್ಯವನ್ನೇ ಅಣಕಿಸುವ, ಅವರ ನೈತಿಕತೆಯನ್ನೇ ಶಂಕಿಸುವ ಈಶ್ವರಪ್ಪನವರು ಬಿಜೆಪಿಯ ನೈಜ ಮುಖವಾಡ ಎಂದು ಆರೋಪಿಸಿದ್ದಾರೆ.
ಬಾವುಟ ಕಟ್ಟಲು, ಕರಪತ್ರ ಹಂಚಲು, ಮತ ಕೇಳಲು, ಟೆಂಟ್ ಹಾಕಲು, ಗೆದ್ದವರನ್ನು ಭುಜದ ಮೇಲೆ ಹೊತ್ತು ಮೆರವಣಿಗೆ ಮಾಡಲು ಇದೇ ಯುವಕರು ಬೇಕು. ಇಂಥ ಯುವಕರಿಗೆ ನಾಯಕರಾದವರೇ ಧರ್ಮದ ಅಫೀಮಿನ ಅಮಲೇರಿಸಿ, ಅವರ ಜೀವಕ್ಕೆ ಸಂಚಕಾರ ತಂದು, ಅವರ ಕುಟುಂಬಗಳನ್ನು ಬೀದಿಪಾಲು ಮಾಡುವ ಕಿರಾತಕ, ಕೊಲೆಗೆಡುಕ ರಾಜಕಾರಣಕ್ಕೆ ಈಶ್ವರಪ್ಪನವರೇ ಪರಾಕಾಷ್ಠೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಿಗೂ ಕಾಲಿಟ್ಟ ಮಂಕಿಪಾಕ್ಸ್: ಇಥಿಯೋಪಿಯದಿಂದ ಬಂದ ವ್ಯಕ್ತಿಗೆ ಸೋಂಕು
“ರಾಜೀನಾಮೆ ಒಪ್ಪಿದರೆ ನಿಮ್ಮ ಗತಿ ಏನು? ನಿಮ್ಮ ಜಾಗಕ್ಕೆ ಹೊಸಬರು ಬರುತ್ತಾರೆ! ಬಿಜೆಪಿಗೆ ಕಾರ್ಯಕರ್ತರು ಸಿಗುವುದಿಲ್ಲವೇ? ಯುವಮೋರ್ಚಾ ಕಾರ್ಯಕರ್ತರು ಈಗಷ್ಟೇ ಕಣ್ಣು ಬಿಡುತ್ತಿದ್ದಾರೆ. ಪಕ್ಷಕ್ಕೆ ಅವರ ಕೊಡುಗೆ ಏನು?” ಎಂದು ಪ್ರಶ್ನಿಸಿರುವ ಈಶ್ವರಪ್ಪ, ಸಭ್ಯ ರಾಜಕಾರಣದ ಎಲ್ಲೆ ಮೀರಿ ಅಹಂಕಾರ ಪ್ರದರ್ಶಿಸಿದ್ದಾರೆ. ಕಗ್ಗೊಲೆಯಾದ ಬಡ ಯುವಕರ ಆತ್ಮಘೋಷದ ಶಾಪ ಬಿಜೆಪಿಗೆ ತಟ್ಟದೆ ಇರದು. ಕರ್ನಾಟಕವನ್ನು ʼಕಗ್ಗೊಲೆಗಳ ಕರ್ನಾಟಕʼವನ್ನಾಗಿ ಮಾಡಿದ ಕುಖ್ಯಾತಿ ಈ ಪಕ್ಷದ್ದೇ. ಕಮಲದ ರೆಕ್ಕೆಗಳಿಗೆ ಅಂಟಿಕೊಂಡಿರುವ ರಕ್ತದ ಕಲೆಗಳು, ನಿಮ್ಮ ಪಾಪದ ಕೊಡವನ್ನು ತುಂಬಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.