ಎಚ್‌ಡಿಕೆ ಬಿರುಸಿನ ಚಟುವಟಿಕೆ, ದೇವಾಲಯಗಳತ್ತ; 24 ಕ್ಕೇ ವಿಶ್ವಾಸಮತ
Team Udayavani, May 20, 2018, 11:26 AM IST
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರದ ನಿವಾಸದಲ್ಲಿ ರಾಜಕೀಯ ಮತ್ತು ಆಡಳಿತಾತ್ಮಕ ಚಟುವಟಿಕೆಗಳು ಬಿರುಸುಗೊಂಡಿದ್ದು, ಸಾವಿರಾರು ಅಭಿಮಾನಿಗಳು ನಿವಾಸದತ್ತ ದೌಡಾಯಿಸಿ ಭಾವೀ ಮುಖ್ಯಮಂತ್ರಿಗೆ ಅಭಿನಂದಿಸಲು ಹಾತೋರೆಯುತ್ತಿದ್ದಾರೆ. ನಿವಾಸದ ಬಳಿ ಭದ್ರತೆ ಬಿಗಿ ಗೊಳಿಸಲಾಗಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಶ್ರೀರಂಗಂ ದೇವಾಲಯದತ್ತ ಎಚ್.ಡಿ.ಬ್ರದರ್ಸ್
ವಾಡಿಕೆಯಂತೆ ತಮಿಳುನಾಡಿನ ತಿರುಚ್ಚಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀಂಗಂ ದೇವಾಲಕ್ಕೆ ಎಚ್‌ಡಿಕೆ ಅವರು ಇಂದು ಭಾನುವಾರ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದು, ಅವರೊಂದಿಗೆ ಎಚ್.ಡಿ.ರೇವಣ್ಣ ಅವರು ತೆರಳುತ್ತಿದ್ದಾರೆ.
ನಾಳೆ ದೆಹಲಿಗೆ; ಸೋನಿಯಾ,ರಾಹುಲ್ ಭೇಟಿ
ಸೋಮವಾರ ಎಚ್‌ಡಿಕೆ ಅವರು ಇತರ ಕೆಲ ಮುಖಂಡರೊಂದಿಗೆ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಚಿವ ಸ್ಥಾನ ಹಂಚಿಕೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಬುಧವಾರ ಪ್ರಮಾಣ ವಚನ
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಎಚ್‌ಡಿಕೆ ಅವರು 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ ಸದನದಲ್ಲಿ ಸ್ಪೀಕರ್ ಆಯ್ಕೆ ನಡೆದ ಬಳಿಕ ವಿಶ್ವಾಸಮತವನ್ನೂ ಸಾಬೀತು ಪಡಿಸುವುದಾಗಿ ಅವರು ಹೇಳಿದ್ದಾರೆ.
ಮಂಡ್ಯ,ಮೈಸೂರು, ಹಾಸನ, ರಾಮನಗರ ಮತ್ತು ರಾಜ್ಯದ ವಿವಿಧ ಕಡೆಗಳಿಂದ ಸಾವಿರಾರು ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಎಚ್‌ಡಿಕೆ ಅಭಿಮಾನಿಗಳು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎನ್ನಲಾಗಿದೆ.
ಸಿಎಸ್, ಐಜಿ&ಡಿಐಜಿ ಜೊತೆ ಚರ್ಚೆ
ನಿಯೋಜಿತ ಸಿಎಂ ಎಚ್‌ಡಿಕೆ ಅವರ ನಿವಾಸಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ, ಪೊಲೀಸ್ ಮಹಾ ನೀರ್ದೇಶಕಿ ನೀಲಮಣಿ ಎನ್.ರಾಜು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು ಭೇಟಿ ನೀಡಿ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭದ್ರತೆ ನೀಡುವ ಕುರಿತಾಗಿಯೂ ಚರ್ಚೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.