ಎಚ್ಡಿಕೆ ಫೋನ್ ಕದ್ದಾಲಿಕೆ ಹೇಳಿಕೆ ಬಾಲಿಶ: ಪಾಟೀಲ್
Team Udayavani, Sep 28, 2019, 3:00 AM IST
ವಿಜಯಪುರ: ಎಲ್ಲ ಸರ್ಕಾರಗಳೂ ಫೋನ್ ಕದ್ದಾಲಿಕೆ ಮಾಡುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಾಲಿಶತನದಿಂದ ಕೂಡಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ತಿರುಗೇಟು ನೀಡಿದ್ದಾರೆ. ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲ ಸರ್ಕಾರದಲ್ಲಿಯೂ ಫೋನ್ ಕದ್ದಾಲಿಕೆ ನಡೆಯುತ್ತದೆ ಎಂಬ ಹೇಳಿಕೆ ಸರಿಯಲ್ಲ.
ಮಾಜಿ ಸಿಎಂ ಆಗಿರುವ ಅವರಿಗೆ ಇಂಥ ಹೇಳಿಕೆ ಶೋಭೆ ತರುವುದಿಲ್ಲ. ಫೋನ್ ಟ್ಯಾಪಿಂಗ್ ಮಾಡುವುದು ಕಾನೂನು ಪ್ರಕಾರ ಅಪರಾಧ. ಹೀಗಾಗಿ, ಕುಮಾರಸ್ವಾಮಿ ಜವಾಬ್ದಾರಿಯಿಂದ ಮಾತನಾಡಲಿ. ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ಈಗಾಗಲೇ ತನಿಖೆ ಆರಂಭಿಸಿದ್ದು, ಹಿರಿಯ ಪೊಲೀಸ್ ಅ ಧಿಕಾರಿ ಅಲೋಕ್ಕುಮಾರ ವಿಚಾರಣೆ ನಡೆಯುತ್ತಿದೆ. ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.