ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ: ಬ್ಯಾನರ್ಜಿಯನ್ನು ಗುಣಗಾನ ಮಾಡಿದ ಕುಮಾರಸ್ವಾಮಿ
Team Udayavani, May 2, 2021, 4:49 PM IST
ಬೆಂಗಳೂರು : ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ ಎಂದಿದ್ದಾರೆ.
ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್ ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲು ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ.
ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ.
ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.