ಅಕ್ಟೋಬರ್ ವರೆಗೆ ಕಾದು ನಂತರ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಿ: ಕುಮಾರಸ್ವಾಮಿ
Team Udayavani, Jun 23, 2020, 1:34 PM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಿಕೆಯಾಗಿದ್ದ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಗುರುವಾರ ( ಜೂ. 25) ರಂದು ಆರಂಭವಾಗಲಿದೆ. ಆದರೆ ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಗುರುವಾರದಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಂತರ ನಡೆಸಲಿ ಎಂದಿದ್ದಾರೆ.
ಕೋವಿಡ್-19 ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಎಚ್ ಡಿಕೆ ಆರೋಪಿಸಿದ್ದಾರೆ.
ಕೋವಿಡ್-19 ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ ಎಂದು ಎಚ್ ಡಿಕೆ ಹೇಳಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷಾ ಕಾರಣದಿಂದ ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.