ಕೈದಿಗಳ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸೂಚನೆ
Team Udayavani, Mar 3, 2024, 9:43 PM IST
ಬೆಂಗಳೂರು: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನಿರ್ದೇಶನದಂತೆ ಕಾರಾಗೃಹದಲ್ಲಿರುವ ಕೈದಿಗಳಿಗೆ ನಿಯಮಿತವಾಗಿ ಎಚ್‌ಐವಿ, ಕ್ಷಯ, ಲೈಂಗಿಕವಾಗಿ ಹರಡುವ ರೋಗಗಳು ಹಾಗೂ ಇತರ ಸಾಂಕ್ರಾಮಿಕ ರೋಗಗಳ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಕೈದಿಗಳ ಆರೋಗ್ಯವನ್ನು ಜಿಲ್ಲಾಸ್ಪತ್ರೆ ವೈದ್ಯರ ತಂಡ ಮೂಲಕ ಪರಿಶೀಲಿಸಲಿದೆ. ಕೈದಿಗಳ ವೈದ್ಯಕೀಯ ತಪಾಸಣೆ ಕುರಿತು ಪ್ರತಿ ಮೂರು ತಿಂಗಳಿಗೊಮ್ಮೆ ಪರಿಶೀಲನೆ ಸಭೆ ನಡೆಸಿ ವರದಿ ಸಲ್ಲಿಸಬೇಕು.
ಇನ್ನೂ ಕಾರ್ಯಕ್ರಮಾಧಿಕಾರಿಗಳು ಜೈಲಿನ ಅಡುಗೆ ಮನೆ, ನೀರು ಸರಬರಾಜು, ಕುಡಿಯುವ ನೀರಿನ ಗುಣಮಟ್ಟ, ತ್ಯಾಜ್ಯ ವಿಲೇವಾರಿ, ಶೌಚಾಲಯ, ಸೊಳ್ಳೆಗಳ ಲಾರ್ವ ಉತ್ಪತ್ತಿ ತಾಣಗಳ ನಾಶ ಸಹಿತ ಆರೋಗ್ಯ ಸಂಬಂಧಿಸಿದ ಇತರ ವ್ಯವಸ್ಥೆಯನ್ನು ಕಾಲ ಕಾಲಕ್ಕೆ ಪರಿಶೀಲಿಸಿ ಜೈಲು ನಿರ್ವಹಣಾಧಿಕಾರಿಗಳು, ಕಾರಾಗೃಹ ಆಸ್ಪತ್ರೆ ಸಿಬಂದಿ ಹಾಗೂ ಶುಶ್ರೂಷಕರಿಗೆ ಸೂಚನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.