ಕೋವಿಡ್‌, ಡೆಂಗ್ಯೂ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ: ಸಚಿವ ಸುಧಾಕರ್‌

Team Udayavani, Jun 13, 2022, 6:36 PM IST

ಕೋವಿಡ್‌, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ: ಸಚಿವ ಸುಧಾಕರ್‌

ಬೆಂಗಳೂರು: ಕೋವಿಡ್‌ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜಧಾನಿ ಬೆಂಗಳೂರಿನಲ್ಲಿಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್‌ ಡೋಸ್‌ ಪಡೆದುಕೊಳ್ಳಬೇಕು. ಹಾಗೆಯೇ ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ ಎಂದರು.

ಇಲಾಖೆಯು ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದು ಸಹ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಿರಬಹುದು. ಆದರೆ ರೋಗ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲು ಆಗುವ ಪ್ರಕರಣಗಳು ತೀರಾ ಕಡಿಮೆ. ಇದನ್ನು ನಾಲ್ಕನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿಸಿಲ್ಲ ಎಂದರು.

ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಜಿನೋಮಿಕ್‌ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು.

ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳವಾರ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್‌ ಅವರ ಜತೆ ಪರಿಶೀಲನೆ ನಡೆಸುವುದಾಗಿಯೂ ಸಚಿವ ಸುಧಾಕರ್‌ ತಿಳಿಸಿದರು.

ಟಾಪ್ ನ್ಯೂಸ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.