Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


Team Udayavani, Nov 26, 2024, 6:57 AM IST

CM DCM

ಬೆಂಗಳೂರು: ಉಪಸಮರ ನಡೆದ ಮೂರೂ ಕ್ಷೇತ್ರಗಳಲ್ಲಿ ಆಡಳಿತ ಪಕ್ಷ ಜಯಭೇರಿ ಬಾರಿಸಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಬೇಕೆಂಬ ಕೂಗು ಗಟ್ಟಿಯಾಗುತ್ತಿದ್ದು, ಈ ಸಂಬಂಧ ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಸೇರಿದಂತೆ ಪಕ್ಷದ ನಾಯಕರು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ.

ಸಚಿವ ಸಂಪುಟ ವಿಸ್ತರಿಸುವ ಮನಸ್ಸಿದ್ದರೂ ಮುಡಾ ನಿವೇಶನ ಹಂಚಿಕೆ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ವಕ್ಫ್ ಆಸ್ತಿ ವಿವಾದದಂತಹ ಹಲವು ಕಾರಣಗಳಿಂದ ಆ ಸಾಹಸಕ್ಕೆ ಸದ್ಯ ಕೈಹಾಕುವುದೇ ಬೇಡ ಎಂಬ ನಿಲುವಿಗೆ ಸಿಎಂ-ಡಿಸಿಎಂ ಬಂದಿದ್ದರು. ಆದರೆ ಉಪಚುನಾವಣೆ ಫ‌ಲಿತಾಂಶವು ಸರಕಾರದ ಆತ್ಮವಿಶ್ವಾಸ ಹೆಚ್ಚಿಸಿದೆ. ಜತೆಗೆ ಸಚಿವ ಸಂಪುಟ ವಿಸ್ತರಣೆ ವಿಷಯಕ್ಕೆ ರೆಕ್ಕೆಪುಕ್ಕವೂ ಬಂದಿದೆ.ಡಿಸೆಂಬರ್‌ ಮಧ್ಯಭಾಗದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.

ಹೊಸ ವರ್ಷಕ್ಕೆ ಅಂದರೆ ಜನವರಿಯಲ್ಲಿ ಮತ್ತೆ ಜಂಟಿ ಅಧಿವೇಶನ ಆರಂಭವಾಗಲಿದೆ. ತದನಂತರ ಬಜೆಟ್‌ ಸಿದ್ಧತೆಗಳು ಆರಂಭವಾಗುತ್ತವೆ. ಅದು ಮುಗಿಯುತ್ತಿದ್ದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೈಹಾಕುವ ಆಲೋಚನೆ ಇದೆ. ಹಾಗಾಗಿ ಈಗ ತಪ್ಪಿದರೆ ಇನ್ನು 4 ತಿಂಗಳು ಇದು ಸಾಧ್ಯವಾಗುವುದಿಲ್ಲ. ಆದ್ದರಿಂದ ಚಳಿಗಾಲದ ಅಧಿವೇಶನಕ್ಕೆ ಮುನ್ನ ಅಥವಾ ಕೊನೆಯ ಪಕ್ಷ ಹೊಸ ವರ್ಷದ ಆರಂಭದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಕೈಹಾಕುವ ಚಿಂತನೆ ಇದ್ದು, ಈ ಸಂಬಂಧ ಹೈಕಮಾಂಡ್‌ಗೆ “ಹಸುರು ನಿಶಾನೆ’ ನೀಡುವಂತೆ ರಾಜ್ಯ ನಾಯಕರು ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಲವು ಆಕಾಂಕ್ಷಿಗಳು?
ಸಚಿವ ಸಂಪುಟ ಸೇರಲು ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಅದರಲ್ಲಿ ಮುಖ್ಯವಾಗಿ ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್‌, ಮಾಜಿ ಸಚಿವ ಬಿ. ನಾಗೇಂದ್ರ ಮುಂಚೂಣಿಯಲ್ಲಿದ್ದಾರೆ. ಹರಿಪ್ರಸಾದ್‌ಗೆ ಈ ಹಿಂದೆಯೇ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಅವಕಾಶ ವಂಚಿತರಾಗಿದ್ದು, ಈ ಬಗೆಗೆ ಅಸಮಾಧಾನವನ್ನು ಅವರು ಹಲವು ರೂಪದಲ್ಲಿ ಹೊರಹಾಕಿದ್ದಾರೆ. ಅನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಪ್ರಕರಣ, ವಾಲ್ಮೀಕಿ ಹಗರಣದ ಆರೋಪಗಳು ಕೇಳಿಬಂದ ಅನಂತರ ನಡೆದ ಬೆಳವಣಿಗಳಿಂದ ಸಿಎಂ ಸಿದ್ದರಾಮಯ್ಯಹರಿಪ್ರಸಾದ್‌ ಮತ್ತೆ ಹತ್ತಿರವಾದರು. ಈಗ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಅವಕಾಶ ಇದೆ ಎನ್ನಲಾಗುತ್ತಿದೆ. ಇನ್ನು ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವುದಾಗಿ ಸ್ವತಃ ಸಿಎಂ ಸಂಡೂರು ಉಪಚುನಾವಣೆ ಪ್ರಚಾರದ ವೇಳೆ ವಾಗ್ಧಾನ ಮಾಡಿದ್ದರು.

ಅಲ್ಲದೆ ಶಾಸಕರಾದ ಮಳ್ಳವಳ್ಳಿಯ ನರೇಂದ್ರಸ್ವಾಮಿ, ಬೆಳಗಾವಿಯ ಆಸಿಫ್ ಸೇs…, ಮಾಜಿ ಸಚಿವರಾದ ವಿನಯ ಕುಲಕರ್ಣಿ, ಲಕ್ಷ್ಮಣ ಸವದಿ, ಆನೇಕಲ್‌ ಶಿವಣ್ಣ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರ ಜತೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಸಿಎಂ ಹಣಕಾಸು ಸಲಹೆಗಾರ ಬಸವರಾಜ ರಾಯರೆಡ್ಡಿ ಸಹಿತ ಹಲವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ವಿವಿಧ ಮಾನದಂಡಗಳ ಆಧಾರದಲ್ಲಿ ಪ್ರಭಾವ ಬೀರುತ್ತಿದ್ದಾರೆ ಎನ್ನಾಲಗಿದೆ.

ಕೆಲವರಿಗೆ ಕೊಕ್‌?
ಹೊಸ ಸೇರ್ಪಡೆಗಾಗಿ ಈಗಾಗಲೇ ಇರುವ ಕೆಲವರನ್ನು ಸಂಪುಟದಿಂದ ಕೈಬಿಡುವ ಆಲೋಚನೆಯೂ ಇದೆ. ಕೆಲವರು ಹೊಂದಿರುವ ಖಾತೆಗಳು ಪ್ರಮುಖವಾಗಿವೆ. ಆದರೆ ಅವುಗಳ ನಿರ್ವಹಣೆ ಅತ್ಯಂತ ಕಳಪೆಯಾಗಿದೆ. ಕೊನೆಯ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಅವರ ಕಾರ್ಯವೈಖರಿ ತೃಪ್ತಿಕರವಾಗಿಲ್ಲ. ಈ ಹಿನ್ನೆಲೆಯಲ್ಲಿ ಅಂಥವರನ್ನು ಕೈಬಿಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎನ್ನಲಾಗಿದೆ.

ಆಕಾಂಕ್ಷಿಗಳು ಯಾರು?
ಬಿ.ಕೆ. ಹರಿಪ್ರಸಾದ್‌, ವಿಧಾನ ಪರಿಷತ್‌ ಸದಸ್ಯ
ಬಿ. ನಾಗೇಂದ್ರ, ಶಾಸಕ ಬಳ್ಳಾರಿ ಗ್ರಾಮೀಣ (ಮಾಜಿ ಸಚಿವ)
ನರೇಂದ್ರಸ್ವಾಮಿ, ಶಾಸಕ, ಮಳವಳ್ಳಿ
ಆಸಿಫ್ ಸೇಠ್ , ಶಾಸಕ ಬೆಳಗಾವಿ
ವಿನಯ ಕುಲಕರ್ಣಿ, ಶಾಸಕ, ಧಾರವಾಡ
ಲಕ್ಷ್ಮಣ ಸವದಿ, ಶಾಸಕ, ಅಥಣಿ
ಆನೇಕಲ್‌ ಶಿವಣ್ಣ, ಶಾಸಕ, ಆನೇಕಲ್‌
ರುದ್ರಪ್ಪ ಲಮಾಣಿ, ಶಾಸಕ, ಹಾವೇರಿ (ವಿಧಾನಸಭಾ ಉಪಾಧ್ಯಕ್ಷ )
ಬಿ.ಕೆ. ಸಂಗಮೇಶ್ವರ, ಶಾಸಕ, ಭದ್ರಾವತಿ
ಡಾ| ಅಜಯ್‌ ಸಿಂಗ್‌, ಜೇವರ್ಗಿ (ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ)
ಬಸವರಾಜ ರಾಯರೆಡ್ಡಿ, ಶಾಸಕ, ಯಲಬುರ್ಗಾ (ಸಿಎಂ ಹಣಕಾಸು ಸಲಹೆಗಾರ)

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.