ಕುಂಭದ್ರೋಣ ಮಳೆಗೆ ತತ್ತರಿಸಿದ ಬೆಂಗಳೂರು,ಮೈಸೂರು; 2 ಬಲಿ
Team Udayavani, Sep 27, 2017, 10:26 AM IST
ಬೆಂಗಳೂರು : ಮಂಗಳವಾರ ತಡರಾತ್ರಿಯಿಂದ ಬುಧವಾರ ಬೆಳಗ್ಗಿನವರೆಗೆ ಸುರಿದ ಕುಂಭದ್ರೋಣ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು,ದಸರಾ ಸಂಭ್ರಮದಲ್ಲಿದ್ದ ಮೈಸೂರು ತತ್ತರಿಸಿ ಹೋಗಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿ ಜನರು ಪರದಾಡುತ್ತಿದ್ದಾರೆ.
ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ
ಕೆ.ಆರ್.ಪುರಂನ ಆರ್‌ಎಂಎಸ್ ಬಡಾವಣೆಯಲ್ಲಿ ಮನೆಗೆ ನೀರು ನುಗ್ಗಿ ವಿದ್ಯುತ್ ಶಾಕ್‌ಗೀಡಾಗಿ ಮೀನಮ್ಮ ಎಂಬ ವೃದ್ಧೆ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಕರೆಂಟ್ ಹೋಗಿದ್ದ ವೇಳೆ ಯುಪಿಎಸ್ ಏಕಾಏಕಿ ಆನ್ ಆಗಿ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಗೋಡೆ ಕುಸಿದು ವ್ಯಕ್ತಿ ಸಾವು
ಬೆಂಗಳೂರು ಉತ್ತರ ತಾಲೂಕಿನ ಆಲೂರು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿ ನಾರಾಯಣಪ್ಪ(48 ) ಎನ್ನುವವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದಸರಾ ಸಂಭ್ರಮಕ್ಕೆ ವರುಣನ ಅವಕೃಪೆ
ಬೆಂಗಳೂರು ಮಾತ್ರವಲ್ಲದೆ ಮೈಸೂರಿನಲ್ಲೂ ಭಾರಿ ಮಳೆಯಾಗಿದ್ದು, ನಗರದ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ದಸರಾ ಸಂಭ್ರಮದಲ್ಲಿದ್ದ ಅರಮನೆ ನಗರಿಯಲ್ಲಿ ಪ್ರವಾಸಿಗರ ಸಂಭ್ರಮಕ್ಕೆ ಭಾರಿ ಮಳೆ ತಡೆಯೊಡ್ಡಿದೆ. ಇನ್ನೆರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದ್ದು , ಆಗಮಿಸಲು ಸಿದ್ದರಾಗಿದ್ದ ಪ್ರವಾಸಗರು ಮತ್ತು ವಿವಿಧ ಕಾರ್ಯಕ್ರಮಗಳಿಗೆ ತೀವ್ರ ಅಡಚಣೆಯಾಗಲಿದೆ. ಅನೇಕ ವೇದಿಕೆಗಳು ಜಲಾವೃತವಾಗಿದ್ದು, ಸ್ಟಾಲ್‌ಗಳಿಗೂ ಹಾನಿಯಾಗಿದೆ.
ಶ್ರೀರಾಂಪುರ ಬಡಾವಣೆ ಸಂಪೂರ್ಣ ಜಲಾವೃತವಾಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದ ಜನರನ್ನು ಅಗ್ನಿಶಾಮಕ ದಳದ ಸಿಬಂದಿಗಳು ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ. ನರಗದ ವಿವಿಧೆಡೆ ರಸ್ತೆಗಳು ಕೆರೆಯಂತಾಗಿವೆ. ಹಲವು ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗಿದೆ.
ಬೆಂಗಳೂರಿನ ಕೋರಮಂಗಲ,ನೆಲಮಂಗಲ, ಜೆ.ಪಿ.ನಗರ, ವೈಟ್‌ಫೀಲ್ಡ್ , ಯವವತಪುರ ಸೇರಿದಂತೆ ಉತ್ತರ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು ತಗ್ಗು ಪ್ರದೇಶಗಳು ಜಲಾವೃತ್ತವಾಗಿ ಜನ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ವಿವಿಧೆಡೆ ಕೆರೆಗಳ ಕೊಡಿ ಒಡೆದಿದ್ದು ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ಮೊಣಕಾಲಿನವರೆಗೆ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ.
ವಿಜಯನಗರದ ಅತ್ತಿಗುಪ್ಪೆಯಲ್ಲಿ ಕಾಲೇಜೊಂದರ ಕಂಪೌಂಡ್ ಕುಸಿದು ಬಿದ್ದು 9 ಕಾರು, 2 ಬೈಕ್‌ಗಳು ಸಂಪೂರ್ಣ ಜಖಂ ಗೊಂಡಿವೆ.
ನೆಲಮಂಗಲ ಭಾಗದಲ್ಲಿ ಭಾರಿ ಮಳೆ ಸುರಿದ್ದಿದ್ದು, ವ್ಯಾಪಕ ಹಾನಿ ಸಂಭವಿಸಿದೆ. ಗಿಡ್ಡೇನ ಹಳ್ಳಿಯಲ್ಲಿ ಕೋಳಿ ಫಾರ್ಮ್ ಒಂದಕ್ಕೆ ನೀರು ನುಗ್ಗಿ 10 ಸಾವಿರ ಕೋಳಿಗಳು ಸಾವನ್ನಪ್ಪಿವೆ. ಮಾಲೀಕ ಅಣ್ಣಪ್ಪಯ್ಯಗೆ 15 ಲಕ್ಷ ನಷ್ಟ ಸಂಭವಿಸಿದ್ದು ಕಂಗಾಲಾಗಿದ್ದಾರೆ.
ಕೊಪ್ಪಳ, ಕೊಳ್ಳೆಗಾಲದಲ್ಲೂ ಮಳೆ
ಕೊಪ್ಪಳದಲ್ಲೂ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಚಾಮರಾಜನಗರ, ಕೊಳ್ಳೆಗಾಲದಲ್ಲೂ ಮಳೆ ಸುರಿದು ಅಪಾರ ಬೆಳೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.