Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ
Team Udayavani, Jun 3, 2024, 10:53 PM IST
ಬೆಂಗಳೂರು/ಹುಬ್ಬಳ್ಳಿ: ಮುಂಗಾರು ಆಗಮನದ ಬೆನ್ನಲ್ಲೇ ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರಿದಿದೆ. ಉತ್ತರ ಕರ್ನಾಟಕ, ಮಲೆನಾಡು ಸಹಿತ 9 ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆಗೆ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕೆಲವೆಡೆ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದು, ಮನೆ, ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ.
ಉತ್ತರ ಕರ್ನಾಟಕದಾದ್ಯಂತ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯನಗರ ಜಿಲ್ಲೆ ಸಂಡೂರು ತಾಲೂಕಿನ ವಿಠಲಾಪುರ ಗ್ರಾ.ಪಂ. ವ್ಯಾಪ್ತಿಯ ತಿಮ್ಮಲಾಪುರದ ಸೇತುವೆ, ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಅಡವಿ ಹುಲಗಬಾಳ-ಅಡವಿ ಹುಲಗಬಾಳ ತಾಂಡಾಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ದಾವಣಗೆರೆ ತಾಲೂಕಿನಲ್ಲಿ ಅಣಜಿ ಹಳ್ಳ ರಭಸವಾಗಿ ಹರಿದ ಪರಿಣಾಮ ನಾಲ್ಕು ಸಂಪರ್ಕ ಸೇತುವೆಗಳು ಕೊಚ್ಚಿ ಹೋಗಿವೆ. ಹುಣಸೇಕಟ್ಟೆ ಗ್ರಾಮದ ಶೇಖರಪ್ಪ ಅವರು ನಾಲ್ಕು ಎಕ್ರೆಯಲ್ಲಿ ಬೆಳೆದಿದ್ದ ಟೊಮೆಟೊ, ಮೆಣಸಿನಕಾಯಿ ನೀರಿನಲ್ಲಿ ಕೊಚ್ಚಿ ಹೋಗಿವೆ. ಅಡಿಕೆ ತೋಟಗಳಿಗೂ ನೀರು ನುಗ್ಗಿ ಬೆಳೆ ನಷ್ಟವಾಗಿದೆ. ಬಳ್ಳಾರಿಯಲ್ಲಿ 18, ವಿಜಯನಗರದಲ್ಲಿ 9 ಮನೆಗಳು ಬಿದ್ದಿವೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ತೋಗುಣಶಿ ತಾಂಡಾ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ.
ನದಿಗಳ ಮಟ್ಟ ಹೆಚ್ಚಳ
ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ತುಂಗಾ, ಭದ್ರಾ, ಹೇಮಾವತಿ, ತುಂಗಭದ್ರಾ, ಅಘನಾಶಿನಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತುಂಗಭದ್ರಾ ಎಡದಂಡೆ ಕಾಲುವೆಯಿಂದ ಉಪ ಕಾಲುವೆಗಳಿಗೆ ನೀರು ಹರಿದು ಬರುತ್ತಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ವಜ್ರಬಂಡಿ ಗ್ರಾಮದ ಪುರಾತನ ಕಾಲದ ಬೃಹತ್ ಆಲದ ಮರವೊಂದು ಪಕ್ಕದ ಮನೆಗಳ ಮನೆ ಮೇಲೆ ಮುರಿದು ಬಿದ್ದಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಹುಲ್ಲಿಕೇರಿ ಗ್ರಾಮದಲ್ಲಿ ಸಿಡಿಲಿಗೆ ಟಗರು ಹಾಗೂ ಎತ್ತು ಬಲಿಯಾಗಿವೆ.
ಕಬಿನಿ ಒಳ ಹರಿವು ಹೆಚ್ಚಳ
ವಯನಾಡು ಪ್ರಾಂತ್ಯದಲ್ಲಿ ಧಾರಾಕಾರ ಮಳೆಯಾದ್ದರಿಂದ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ ಮತ್ತೆ ಹೆಚ್ಚಾಗಿದ್ದು, ಸೋಮವಾರ ಬೆಳಗ್ಗೆ 1178 ಕ್ಯೂಸೆಕ್‌ಗೆ ಏರಿ ಕೆ ಯಾ ಗಿದೆ. ಮೇ 3ನೇ ವಾರದಲ್ಲಿ ಒಳ ಹರಿವಿನ ಪ್ರಮಾಣ 6 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಈಗ ಮತ್ತೆ ಒಳ ಹರಿವು ಪ್ರಮಾಣ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.