ವಿವಿಧ ಜಿಲ್ಲೆಗಳಲ್ಲಿ ಮುಂದುವರಿದ ಮಳೆ
Team Udayavani, Aug 9, 2020, 6:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೊಡಗು ಹೊರತುಪಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಮಳೆ ಕೊಂಚ ತಗ್ಗಿದೆ. ಆಗುಂಬೆಯಲ್ಲಿ ಗರಿಷ್ಠ 22 ಸೆಂ.ಮೀ. ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ನಿಂತಿಲ್ಲ. ಶುಕ್ರವಾರ ಬೆಳಗ್ಗಿನಿಂದೀಚೆಗೆ ಶನಿವಾರ ಬೆಳಗ್ಗಿನ ತನಕ ಭಾಗಮಂಡಲದಲ್ಲಿ 21 ಸೆಂ.ಮೀ. ಮಳೆಯಾಗಿದೆ. ನೂರಾರು ಗ್ರಾಮಗಳು ಮುಳುಗಿವೆ.
ಚಿಕ್ಕಮಗಳೂರಿನಲ್ಲಿ ಮಳೆ ಕೊಂಚ ಬಿಡುವು ನೀಡಿತ್ತು. ಮೂಡಿಗೆರೆ ತಾಲೂಕಿನಲ್ಲಿ ಮಹಿಳೆಯೊಬ್ಬರು ಹೇಮಾವತಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ಮಳೆ ಕೊಂಚ ಕಡಿಮೆಯಾಗಿರುವುದರಿಂದ ಕಬಿನಿ, ನುಗು, ತಾರಕ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಜಲಾಶಯದಿಂದ 70 ಸಾವಿರ ಕ್ಯುಸೆಕ್‌ನೀರನ್ನು ಹರಿಬಿಡಲಾಗಿದೆ. ಕೆಆರ್‌ಎಸ್ ಜಲಾಶಯ ದಿಂದ ಕಾವೇರಿ ನದಿಗೆ 80 ಸಾವಿರ ಕ್ಯುಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮ ಸಹಿತ ನದಿ ತೀರದ ಪ್ರವಾಸಿ ತಾಣಗಳು ಜಲಾವೃತವಾಗಿವೆ. ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹೀಗಾಗಿ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ.
ಕರಾವಳಿಯಲ್ಲಿ ಭಾರೀ ಮಳೆ
ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಶನಿವಾರವೂ ಭಾರೀ ಮಳೆ ಮುಂದುವರಿದಿತ್ತು. ಹಲವು ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಅಪಾಯದಲ್ಲಿರುವ ಮಂದಿಯನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕಲ್ಬೆಟ್ಟು, ದಿಡುಪೆ, ಕೊಲ್ಲಿ ಪ್ರದೇಶದಲ್ಲಿ ನೆರೆ ನೀರು ಕೃಷಿ ಭೂಮಿಗೆ ನುಗ್ಗಿದೆ. ಬಂಟ್ವಾಳ ತಾಲೂಕಿನಲ್ಲಿ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು, 52 ಮನೆಗಳ 253 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಶನಿವಾರ ಉತ್ತಮ ಮಳೆಯಾಗಿದ್ದು, ಅಪಾರ ಕೃಷಿಭೂಮಿ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಚಾರ್ಮಾಡಿ ಘಾಟಿ ಬಂದ್
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಅನೇಕ ಕಡೆ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಆ.11ರ ವರೆಗೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇಂದೂ ಮಳೆ
ಸೋಮವಾರ ಮುಂಜಾನೆಯವರೆಗಿನ 48 ತಾಸುಗಳ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲೆಡೆ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ರಾಜ್ಯ ಕರಾವಳಿಯಲ್ಲಿ ಆ. 9 ರಂದು ರೆಡ್ ಅಲರ್ಟ್, ಆ. 10ರಿಂದ ಆ. 13ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ಪ್ರಕ್ಷುಬ್ಧವಿರಲಿದ್ದು, ಮೀನುಗಾರರು ಸಮುದ್ರಕ್ಕಿಳಿಯ ಬಾರದು ಎಂದು ಎಚ್ಚರಿಸಿದೆ.
ತಲಕಾವೇರಿ: ಮೃತದೇಹ ಪತ್ತೆ
ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಮನೆಗಳೆರಡು ನೆಲಸಮಗೊಂಡು ನಾಪತ್ತೆಯಾದ ಐವರಲ್ಲಿ ಓರ್ವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಆನಂದತೀರ್ಥ (86) ಎಂದು ಗುರುತಿಸಲಾಗಿದ್ದು, ಉಳಿದ ನಾಲ್ವರ ಪತ್ತೆ ಕಾರ್ಯ ಮಳೆಯ ನಡುವೆಯೂ ಚುರುಕುಗೊಂಡಿದೆ.
ಪ್ರಧಾನ ಅರ್ಚಕ ನಾರಾಯಣ ಆಚಾರ್, ಪತ್ನಿ ಶಾಂತಾ, ಸಹಾಯಕರಾದ ಶ್ರೀನಿವಾಸ ಮತ್ತು ರವಿಕಿರಣ್ ಪತ್ತೆಯಲ್ಲಿ ಎನ್‌ಡಿಆರ್ ಎಫ್ ನಿರತವಾಗಿದೆ. ಶನಿವಾರ ಮಳೆಯಾಗುತ್ತಿದ್ದರೂ ಸಚಿವ ವಿ. ಸೋಮಣ್ಣ ಅವರ ಸೂಚನೆಯಂತೆ ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆದಿದ್ದು ಒಬ್ಬರ ದೇಹವನ್ನು ಪತ್ತೆಹಚ್ಚುವಲ್ಲಿ ತಂಡ ಯಶಸ್ವಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.