ಜುಲೈ 31ವರೆಗೂ ವ್ಯಾಪಕ ಮಳೆ
Team Udayavani, Jul 27, 2021, 10:28 PM IST
ಬೆಂಗಳೂರು: ಬಂಗಾಳ ಕೊಲ್ಲಿ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಸಾಧ್ಯತೆಗಳಿದ್ದು, ಪರಿಣಾಮ ರಾಜ್ಯದ ಹಲವೆಡೆ ಜುಲೈ 31ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 27ರಿಂದ ಜುಲೈ 31ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ನೈರುತ್ಯ ಮುಂಗಾರು ಮಂಗಳವಾರ ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಮುಖ್ಯವಾಗಿ, ಶಿವಮೊಗ್ಗ ಮತ್ತು ಕೊಲ್ಲೂರಿನಲ್ಲಿ ತಲಾ 3 ಸೆಂ.ಮೀ.ಮಳೆಯಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಎರಡು ದಿನ ನಗರ ಸೇರಿದಂತೆ ಸುತ್ತಮುತ್ತಲ ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.