48 ಗಂಟೆಗಳಲ್ಲಿ ಭಾರೀ ಮಳೆ? 


Team Udayavani, Jul 11, 2018, 6:00 AM IST

c-419.jpg

ಬೆಂಗಳೂರು: ವಾತಾವರಣದಲ್ಲಿನ ಮೂರು ರೀತಿಯ ಬೆಳವಣಿಗೆಯಿಂದ ಮುಂದಿನ ಎರಡು ದಿನಗಳು ಮಳೆ ಮತ್ತೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಡಿಶಾದಲ್ಲಿ ಮತ್ತು ಪೂರ್ವ-ಪಶ್ಚಿಮ ವಲಯದಲ್ಲಿ ಚಂಡಮಾರುತದ ಪರಿಚಲನೆ ಹಾಗೂ ಕರ್ನಾಟಕ-ಕೇರಳ ಕರಾವಳಿ ಭಾಗದಲ್ಲಿ ಕಡಿಮೆ
ಒತ್ತಡ ಕಂಡುಬಂದಿರುವುದರಿಂದ ರಾಜ್ಯದ ವಿವಿಧೆಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಈ ಮಧ್ಯೆ ಪುನರ್ವಸು ಮಳೆ ಆರ್ಭಟಕ್ಕೆ ಮಲೆನಾಡು ಭಾಗ ತತ್ತರಿಸಿದೆ. ಚಿಕ್ಕಮಗಳೂರಿನ ಕಂಬಿಹಳ್ಳಿ ಗ್ರಾಮದಲ್ಲಿ ಕೊಟ್ಟಿಗೆ ಗೋಡೆ ಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಕಂಬಿಹಳ್ಳಿಯಲ್ಲಿ ಸೋಮವಾರ ರಾತ್ರಿ ಕೊಟ್ಟಿಗೆಗೆ ಹಸು ಕಟ್ಟಲು ತೆರಳಿದ್ದಾಗ ಗೋಡೆ ಕುಸಿದು ಬಿದ್ದು ವನಜಾ (48)
ಎಂಬುವವರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಗೋಡೆ ಶಿಥಿಲಗೊಂಡಿತ್ತು. ಇದನ್ನು ಗಮನಿಸದೆ ಸುರಿಯುತ್ತಿರುವ ಮಳೆಯಲ್ಲೇ ಕೊಟ್ಟಿಗೆಗೆ ತೆರಳಿ 
ದ್ದಾಗ ಅವಘಡ ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ. 

ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೆ, ಮಲೆ ನಾಡು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ಮೂಡಿಗೆರೆ ತಾಲೂಕು ಸೇರಿ ಚಿಕ್ಕಮಗಳೂರು ತಾಲೂಕಿನ ವಿವಿಧೆಡೆ ಸೋಮವಾರ ಸಂಜೆಯಿಂದ ಬಿಡದೇ ಮಳೆಯಾಗುತ್ತಿದೆ.

ಮಂಗಳವಾರ ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯ ಹಲವೆಡೆ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಶೃಂಗೇರಿ ತಾಲೂಕಿನಲ್ಲಿ
ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಶೃಂಗೇರಿ ಶಾರದಾ ಪೀಠದ ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಿದ್ದು,
ಸಂಧ್ಯಾವಂದನ ಮಂಟಪ ಮುಳುಗುವ ಹಂತ ತಲುಪಿದೆ.

ಕೊಪ್ಪ ತಾಲೂಕಿನಲ್ಲೂ ವರುಣನ ಆರ್ಭಟ ಜೋರಾಗಿದೆ. ಬಾಳೆಹೊನ್ನೂರು-ಕಳಸ ರಸ್ತೆಯ ತೆಪ್ಪದಗುಂಡಿ ಬಳಿ ದೊಡ್ಡ ಮರ ಬಿದ್ದು, ಸಂಚಾರ
ಅಸ್ತವ್ಯಸ್ತಗೊಂಡಿತ್ತು. ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಪ್ರವಾಹದ ಭೀತಿ ಎದುರಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಆಯ್ದ ಭಾಗಗಳಲ್ಲಿ ವ್ಯಾಪಕವಾಗಿ ಭಾರಿಯಿಂದ ಅತಿ ಭಾರೀ ಮಳೆ ಬೀಳುವ ನಿರೀಕ್ಷೆ
ಇದೆ. ಅದೇ ರೀತಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳವಾರ ಬೆಳಗ್ಗೆ ಉತ್ತರ ಕನ್ನಡದ ಗೇರುಸೊಪ್ಪದಲ್ಲಿ ಅತಿ ಹೆಚ್ಚು 160 ಮಿ.ಮೀ. ಮಳೆ ದಾಖಲಾಗಿದೆ.

ಬಾಲಕಿ ಶವ ಪತ್ತೆ  
ತಾಯಿಯೊಂದಿಗೆ ಕಾಲುಸಂಕ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಬಾಲಕಿಯ ಶವ ಮಂಗಳವಾರ ಪತ್ತೆಯಾಗಿದೆ. ಆಗುಂಬೆ ವ್ಯಾಪ್ತಿಯ ದುಡ್ಲಿಮನೆ ಬಳಿ ಮರಡಿ ಹಳ್ಳದಲ್ಲಿ ಬಾಲಕಿ ಬಿದ್ದ ಸ್ಥಳದಿಂದ ಒಂದು ಕಿಮೀ ದೂರದಲ್ಲಿ ಪೊದೆಯೊಂದರ ಬಳಿ ಸಿಲುಕಿದ್ದ ಮೃತದೇಹವನ್ನು ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಹೊರತೆಗೆಯಲಾಗಿದೆ. ಮೃತ ವಿದ್ಯಾರ್ಥಿನಿ ಆಶಿಕಾಳ ಮನೆಗೆ ಜಿಲ್ಲಾ ಧಿಕಾರಿ ಡಾ| ಲೋಕೇಶ್‌ ಭೇಟಿ
ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರಲ್ಲದೆ ಸರ್ಕಾರದ ಪರವಾಗಿ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದರು.

ಟಾಪ್ ನ್ಯೂಸ್

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.