Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ
ಜಮೀನುಗಳಿಗೆ ನೀರು ನುಗ್ಗಿ ಅಪಾರ ಬೆಳೆ ನಾಶ ,ಹೆದ್ದಾರಿಗಳು ಜಲಾವೃತ
Team Udayavani, Oct 23, 2024, 12:51 AM IST
ಬೆಂಗಳೂರು/ಹುಬ್ಬಳ್ಳಿ: ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿ ಉತ್ತರ ಕರ್ನಾಟಕ ಭಾಗದ ಹಲವೆಡೆ ಹಿಂಗಾರು ಮಳೆ ಆರ್ಭಟ ಜನಜೀವನವನ್ನು ತತ್ತರಗೊಳಿಸಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅಪಾರ್ಟ್‌ಮೆಂಟ್‌ಗಳು ಜಲಾವೃತಗೊಂಡಿದೆ.
ಉತ್ತರ ಕರ್ನಾಟಕದಲ್ಲಿ ಮಳೆ ತಗ್ಗಿದ್ದರೂ ಅನಾಹುತ ಮಾತ್ರ ನಿಂತಿಲ್ಲ. ಟಿಬಿ ಡ್ಯಾಂ ಒಂದೇ ವರ್ಷದಲ್ಲಿ 4ನೇ ಬಾರಿ ಭರ್ತಿಯಾಗಿದ್ದು ತೀರ ಪ್ರದೇಶದಲ್ಲಿ ನೆರೆ ಆವರಿಸಿದೆ. ಹಲವೆಡೆ ಸಂಪರ್ಕ ಕಡಿತಗೊಂಡಿದೆ.
ನಾಯಕಹಟ್ಟಿಯಲ್ಲಿ 56 ವರ್ಷಗಳ ಬಳಿಕ ಕೆರೆಗಳು ಕೋಡಿ ಬಿದ್ದಿವೆ. ನೂರಾರು ಕೆರೆಗಳು ಕೋಡಿ ಹರಿದು, ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಅನ್ನದಾತ ಕಂಗಾಲಾಗಿದ್ದಾನೆ. ದಾವಣಗೆರೆ, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಾಗಿದೆ.
ಕೆರೆಗಳು ಭರ್ತಿ, ಹೆದ್ದಾರಿ ಜಲಾವೃತ
ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಚಿಕ್ಕಬಳ್ಳಾಪುರ ಸೇರಿ ಹಲವೆಡೆ ಸುರಿದ ಧಾರಾಕಾರ ಮಳೆಗೆ ನೂರಾರು ಕೆರೆಗಳು ಭರ್ತಿಯಾಗಿ ಕೋಡಿ ಹರಿದ ಪರಿಣಾಮ ಬಡಾವಣೆಗಳು ಜಲಾವೃತವಾಗಿದೆ. ಹಾಸನ ನಗರದ ಹೊರ ವಲಯದ ದೊಡ್ಡಕೊಂಡಗೊಳ ಕೆರೆ ಕೋಡಿ ಹರಿದು ತವರುದೇವರ ಕೊಪ್ಪಲು ಬಳಿ ಹಾಸನ – ಹಳೆಬೀಡು ರಾಜ್ಯ ಹೆದ್ದಾರಿ ಜಲಾವೃತವಾಯಿತು. ತೇಜೂರು ಕೆರೆ, ಸತ್ಯವಂಗಲ, ಬೂವನಹಳ್ಳಿ, ಗವೇನಹಳ್ಳಿ ಬುಸ್ತೇನಹಳ್ಳಿ ಮತ್ತು ಹುಣಸಿನ ಕೆರೆ ಭರ್ತಿಯಾಗಿ ಕೋಡಿ ಹರಿದಿವೆ.
ತೋಟಗಾರಿಕ ಬೆಳೆಗಳಿಗೂ ಹಾನಿ
ನಿರಂತರ ಮಳೆ ಕೃಷಿ ಚಟುವಟಿಕೆಗಳ ಮೇಲೂ ದುಷ್ಪರಿಣಾಮ ಬೀರಿದೆ. ಶೇಂಗಾ ಮತ್ತಿತರ ಬೆಳೆಗಳ ಕೊಯ್ಲಿಗೆ ಮಳೆ ಅಡ್ಡಿಯಾಗಿದೆ. ಹೂವಿನ ಬೆಳೆ ಕೊಳೆಯುವಂತಾಗಿದೆ. ಚಿಕ್ಕಬಳ್ಳಾಪುರದಲ್ಲಿ ದಾಳಿಂಬೆ, ದ್ರಾಕ್ಷಿ, ಡ್ರ್ಯಾಗನ್ ಫ್ರೂಟ್ಸ್, ತರಕಾರಿ, ಹೂ ಕೃಷಿಗೆ ನಿರಂತರ ಮಳೆ ಭಾರೀ ಹೊಡೆತ ನೀಡಿದೆ. ಹಾಸನ ತಾಲೂಕಿನ ದುದ್ದ ಹೋಬಳಿಯ ಹಿರಿಕಡಲೂರು ಕೆರೆ ಕೋಡಿ ಒಡೆದು ಅಪಾರ ಪ್ರಮಾಣದ ನೀರು ಅಚ್ಚುಕಟ್ಟು ಪ್ರದೇಶದ ಮೇಲೆ ಹರಿದಿದೆ. ನೂರಾರು ಎಕರೆ ಪ್ರದೇಶದ ಮೆಕ್ಕೆಜೋಳ, ಅಡಿಕೆ, ಶುಂಠಿ, ಎಲೆ ಕೋಸು ಮೊದಲಾದ ಬೆಳೆ ಮಣ್ಣು ಪಾಲಾಗಿವೆ. ಗದಗ ಜಿಲ್ಲೆ ನರೇಗಲ್ಲನಲ್ಲಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಪ್ರದೇಶಲ್ಲಿ ಬೆಳೆದಿದ್ದ ಈರುಳ್ಳಿ ಕೊಚ್ಚಿ ಹೋಗಿದೆ. ಡಂಬಳದಲ್ಲಿ ಸೂರ್ಯಕಾಂತಿ, ಮೆಕ್ಕೆಜೋಳ, ಶೇಂಗಾ, ಹತ್ತಿ ಬೆಳೆ ಜಲಾವೃತವಾಗಿವೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಬಳ್ಳೂರ ಗ್ರಾಮದ ಸರಕಾರಿ ಶಾಲೆಗೆ ಜಲದಿಗ್ಬಂಧನವಾಗಿದೆ. ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಕೃಷಿ ಚಟುವಟಿಕೆಗೆ ಮಳೆ ಅಡ್ಡಿಯಾಗಿದೆ.
ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ.
-ಸಿದ್ದರಾಮಯ್ಯ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.