ಭಾರಿ ಮಳೆಗೆ ಬೆಂಗಳೂರು ತತ್ತರ; ದೇವಾಲಯ,ಮನೆಗಳಿಗೆ ನುಗ್ಗಿದ ನೀರು 


Team Udayavani, May 28, 2017, 9:38 AM IST

55555.jpg

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿದ್ದು, ಕಳೆದೊಂದು ವಾರದಿಂದ ಸುರಿದ ಮಳೆಗೆ 400ಕ್ಕೂ ಹೆಚ್ಚು ಮರ, ಕೊಂಬೆಗಳು ಧರೆಗುರುಳಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಂದೂ ಮಳೆಯಾಗುವ ಸಾಧ್ಯತೆಗಳಿದ್ದು ತಗ್ಗು ಪ್ರದೇಶದ ಜನರಲ್ಲಿ ತೀವ್ರ ಆತಂಕ ನಿರ್ಮಾಣವಾಗಿದೆ. 

ಶುಕ್ರ ವಾರ ಸುರಿದ ಭಾರಿ ಮಳೆ ಹಾಗೂ ಶನಿವಾರ ಆಲಿಕಲ್ಲು ಸಮೇತ ಸುರಿದ ಮಳೆಗೆ 400ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ತಗ್ಗು ಪ್ರದೇಶಗಳಲ್ಲಿರುವ ನೂರಾರು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು  ಪರದಾಡುವಂತಾಗಿದೆ. ಜತೆಗೆ ನಗರದಲ್ಲಿ 80ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್‌ ಕಂಬಗಳು ಬಿದ್ದು ವಿದ್ಯುತ್‌ ವ್ಯತ್ಯಯವಾಗಿದೆ.

ಹೊಸಕೆರೆಹಳ್ಳಿಯ ದತ್ತಾತ್ರೇಯ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿ ಸಂಪೂರ್ಣ ಜಲವೃತವಾಗಿತ್ತು. 5 ಅಡಿಯಷ್ಟು ಕೊಳಚೆ ನೀರು ನಿಂತಿದ್ದು ದೇವವರ ವಿಗ್ರಹವೂ  ನೀರಲ್ಲಿ ಮುಳುಗಿ ಹೋಗಿದೆ.  ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ದೇವಸ್ಥಾನ ಮಂಡಳಿಯವರು ಸೇರಿಕೊಂಡು ಕೊಚ್ಚೆ ನೀರನ್ನು ಹೊರಹಾಕಿ ಸ್ವಚ್ಛತಾ  ಕಾರ್ಯ ಕೆಲಸ ಮಾಡುತ್ತಿದ್ದಾರೆ.ಪ್ರದೇಶದ 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಪರದಾಡಬೇಕಾಗಿದೆ. 

ಶುಕ್ರವಾರ ನಗರದ ಹಲವೆಡೆ ಮರಗಳು ವಾಹನ ಸವಾರರ ಮೇಲೆ ಬಿದ್ದ ಪರಿಣಾಮ ನಾಲ್ಕೈದು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ವಾಹನಗಳುಜಖಂಗೊಂಡಿವೆ. ಗಾಂಧಿ ಬಜಾರ್‌, ರಾಜಭವನ, ಕಸ್ತೂರ ಬಾ ರಸ್ತೆ, ಕಾರ್ಪೋರೇಷನ್‌ ವೃತ್ತ, ಬಸವನಗುಡಿ, ಮಿನರ್ವ ವೃತ್ತ, ರಾಜಭವನದ ಮುಂಭಾಗ, ಬಳ್ಳಾರಿ ರಸ್ತೆ ಸೇರಿದಂತೆ ಪ್ರಮುಖ ಭಾಗಗಳಲ್ಲಿ ಗಂಟೆಗಟ್ಟಲೇ ಸವಾರರು ರಸ್ತೆಯಲ್ಲಿರಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿತ್ತು. ಮಳೆಗಾಲಕ್ಕೆ ಮೊದಲೇ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆಗಳು ಎದುರಾಗಿವೆ.

ಪಾಲಿಕೆಯ ಅರಣ್ಯ ಘಟಕದಲ್ಲಿ ಕೇವಲ 21 ತುರ್ತು ನಿರ್ವಹಣಾ ತಂಡಗಳಿದ್ದು, ಈ ಪೈಕಿ 17 ತಂಡಗಳು ಹಗಲಿನಲ್ಲಿ ಹಾಗೂ 4 ತಂಡಗಳು ಮಾತ್ರ ರಾತ್ರಿ ವೇಳೆ ಕಾರ್ಯ ನಿರ್ವಹಿಸುತ್ತಿವೆ. ಕಳೆದೊಂದು ವಾರದಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದರೂ ಪಾಲಿಕೆ ಹೆಚ್ಚುವರಿ ತಂಡಗಳನ್ನು ನೇಮಿಸಿಕೊಳ್ಳಲು ಮುಂದಾಗಿಲ್ಲ. ಇದರಿಂದ ತಂಡಗಳು ಒಂದ ಕಡೆ ಕಾರ್ಯಾಚರಣೆಯಲ್ಲಿ ನಿರತವಾದರೆ ಮತ್ತೂಂದು ಕಡೆಯಿಂದ ಬರುವ ದೂರುಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಗಲು ವೇಳೆಗಿಂತ ರಾತ್ರಿ ಹೆಚ್ಚಿನ ತಂಡಗಳು ಕಾರ್ಯ ನಿರ್ವಹಿ ಸಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

ಅಂಡರ್‌ಪಾಸ್‌ಗಳು ಜಲಾವೃತ!
ನಗರದಲ್ಲಿ ಶುಕ್ರವಾರ ಹಾಗೂ ಶನಿವಾರ ಸುರಿದ ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ನುಗ್ಗಿ ಜನರ ನಿದ್ದೆಗೆಡಿಸಿದೆ. ಇದರೊಂದಿಗೆ ನಗರ ಕೇಂದ್ರ ಭಾಗದಲ್ಲಿರುವ ರಿಚ್‌ಮಂಡ್‌ಟೌನ್‌, ಕಲಾಸಿಪಾಳ್ಯ, ಬಂಬೂಬಜಾರ್‌, ಸಹಕಾರ ನಗರ, ಆರ್‌.ಕೆ.ಗಾರ್ಡನ್‌, ಸಂಪಂಗಿರಾಮನಗರ, ಶಾಂತಿನಗರ, ಮಡಿವಾಳ, ಕೃಪಾನಿಧಿ ಲೇಔಟ್‌, ಅಂಜನಾಪುರ, ಬೆಳ್ಳಂದೂರು, ವಿಜಿನಾಪುರ, ಕೆಂಪಾಪುರ, ಅರೆಕೆರೆ, ಶಾಂತಿನಗರ, ಚಿಕ್ಕಲಸಂದ್ರ, ಉತ್ತರಹಳ್ಳಿ, ಅಕ್ಷಯ ನಗರ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್‌ನಲ್ಲಿ ಹಲವು ತಗ್ಗು ಪ್ರದೇಶಗಳಲಿರುವ ಮನೆಗಳಿಗೆ ನೀರು ನುಗ್ಗಿದೆ. ಮಳೆನೀರು ಕಾಲುವೆಗಳು ಉಕ್ಕಿ ಹರಿದು ಅಕ್ಷಯ ನಗರ ಮತ್ತು ಬೊಮ್ಮನಹಳ್ಳಿಯ ಕೆಲ ಪ್ರದೇಶಗಳಲ್ಲಿ ಎರಡು ಮೂರು ಅಡಿಯಷ್ಟು ನೀರು ನಿಂತ ದೃಶ್ಯ ಕಂಡುಬಂದಿದೆ. ಶುಕ್ರವಾರ ಸುರಿದ ಮಳೆಗೆ ನಗರದ ಅಂಡರ್‌ ಪಾಸ್‌ ಹಾಗೂತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಟಾಪ್ ನ್ಯೂಸ್

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.