ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ
Team Udayavani, Jul 9, 2022, 9:16 AM IST
ಬೆಂಗಳೂರು: ಶುಕ್ರವಾರ ಸಂಜೆ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ. 080-1070, 22340676, ಇಮೇಲ್: [email protected]
ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ ಭಕ್ತರು ವಾಸ್ತವ್ಯ ಹೂಡಿದ್ದ ಟೆಂಟ್‌ಗಳು ಮತ್ತು ಸಮುದಾಯ ಅಡುಗೆ ಮನೆಯತ್ತ ನುಗ್ಗಿ ಬಂದಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೇತೃತ್ವದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರೆಣೆ ನಡೆಸಲಾಗುತ್ತಿದೆ.
ಸಿಎಂ ಕಂಬನಿ: ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಅರ್ಜಿ; ಸುಪ್ರೀಂ ಮೆಟ್ಟಿಲೇರಿದ ಉದ್ಧವ್ ಠಾಕ್ರೆ
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಟ್ರೀಟ್ ನಲ್ಲಿ ಪ್ರಾರ್ಥಿಸಿದ್ದಾರೆ.
ಸಹಾಯವಾಣಿಯ ವಿವರ:
ಎನ್.ಡಿ.ಆರ್.ಎಫ್: 011-23438252, 011-23438253
ಕಶ್ಮೀರ್ ಡಿವಿಷನಲ್ ಹೆಲ್ಪ್ ಲ್ಲೈನ್: 0914- 2496240
ದೇವಸ್ಥಾನ ಮಂಡಳಿಯ ಸಹಯಾವಾಣಿ: 0194-2313149
ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070, 22340676
ಸಹಾಯವಾಣಿ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ
Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.