ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಹೈಕೋರ್ಟ್
Team Udayavani, Dec 18, 2019, 3:02 AM IST
ಬೆಂಗಳೂರು: ಸಾರ್ವಜನಿಕರ ದೂರು ಆಧರಿಸಿ ಎಫ್ಐಆರ್ ದಾಖಲಿಸುವಾಗ ಠಾಣೆ ವ್ಯಾಪ್ತಿ ಕೇಳದಂತೆ (ಝೀರೋ ಎಫ್ಐಆರ್) ರಾಜ್ಯದ ಎಲ್ಲಾ ಪೊಲೀಸ್ ಠಾಣೆಗೆ ನಿರ್ದೇಶಿಸುವಂತೆ ಸೆ.19ರಂದು ಹೊರಡಿಸಿದ್ದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಹೈಕೋರ್ಟ್ ಕೈಬಿಟ್ಟಿದೆ. ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾ.ಅರವಿಂದ ಕುಮಾರ್ ಹಾಗೂ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಈ ವೇಳೆ, ಸರ್ಕಾರದ ಪರ ವಕೀಲರು, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅವರ ಪರವಾಗಿ ಪ್ರಮಾಣ ಪತ್ರ ಸಲ್ಲಿಸಿ, ಎಫ್ಐಆರ್ ದಾಖಲಿ ಸುವ ವೇಳೆ ಠಾಣೆ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಾ ಠಾಣೆಗಳಿಗೆ ಸೂಚಿಸಿ ನ.26ರಂದು ಸುತ್ತೋಲೆ ಹೊರಡಿಸ ಲಾಗಿದೆ. ಇಲಾಖೆ ಅಧಿಕೃತ ವೆಬ್ಸೈಟ್ನಲ್ಲೂ ಸುತ್ತೋಲೆ ಪ್ರಕಟಿಸಲಾಗಿದ್ದು, ಸೆ.19ರಂದು ನ್ಯಾಯಾಲಯ ಹೊರಡಿ ಸಿದ್ದ ಆದೇಶ ಪಾಲನೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರಮಾಣಪತ್ರ ದಾಖಲಿಸಿಕೊಂಡ ನ್ಯಾಯಪೀಠ, ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟು ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.