ರೈತರೊಬ್ಬರಿಗೆ “ಕಿಡ್ನಿ ಕಸಿ’ಗೆ ಅವಕಾಶವಿತ್ತ ಹೈಕೋರ್ಟ್
Team Udayavani, Apr 18, 2018, 11:58 AM IST
ಬೆಂಗಳೂರು: ಸಂಬಂಧಿಕ ಮಹಿಳೆಯೊಬ್ಬರಿಂದ ಕಿಡ್ನಿ ಕಸಿಗೆ ಮದ್ದೂರು ತಾಲೂಕಿನ ರೈತ ಡಿ.ಕೆ ರವಿಕುಮಾರ್‌ಗೆ ರಾಜ್ಯ ಆರೋಗ್ಯ ಇಲಾಖೆ ಅನುಮತಿ ನೀಡಿದೆ. ಸಂಬಂಧಿ ಮಹಿಳೆ ಕಿಡ್ನಿ ದಾನ ಮಾಡಲು ಒಪ್ಪಿದ್ದರೂ ಕಿಡ್ನಿ ಕಸಿಗೆ ಅವಕಾಶ ನಿರಾಕರಿಸಿದ್ದ ಇಲಾಖೆಯ ಕ್ರಮ ಪ್ರಶ್ನಿಸಿ ರೈತ ರವಿಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಮಧ್ಯೆ ಆರೋಗ್ಯ ಇಲಾಖೆ ಕಿಡ್ನಿ ಕಸಿಗೆ ಅನುಮತಿ ನೀಡಿತು.
ರವಿಕುಮಾರ್ ಸಲ್ಲಿಸಿದ್ದ ಅರ್ಜಿ ಮಂಗಳವಾರ ನ್ಯಾ. ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಾಗ, ರಾಜ್ಯಸರ್ಕಾರದ ಪರ ವಕೀಲರು ಹೇಳಿಕೆ ನೀಡಿ, ಅರ್ಜಿದಾರರಿಗೆ ಅವರ ಸಂಬಂಧಿ ಮಹಿಳೆಯಿಂದ ಕಿಡ್ನಿ ಕಸಿ ಮಾಡಿಸಿಕೊಳ್ಳಲು ಏ.16ರಂದು ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿ ಇತ್ಯರ್ಥಪಡಿಸಿತು.
ಕಳೆದ ಐದು ವರ್ಷಗಳ ಹಿಂದೆ ಡೆಂ ಜ್ವರದಿಂದ ಕಿಡ್ನಿ ಕಳೆದುಕೊಂಡಿದ್ದ ರವಿಕುಮಾರ್ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದಾಗಿ ಅವರಿಗೆ ಕಿಡ್ನಿ ದಾನ ಮಾಡಲು ಅವರ ಸಂಬಂಧಿ ಮಹಿಳೆಯೊಬ್ಬರು ಸ್ವಇಚ್ಛೆಯಿಂದ ಮುಂದೆ ಬಂದಿದ್ದರು. ಅದರಂತೆ ಕಿಡ್ನಿ ಕಸಿಗೆ ಅನುಮತಿ ಕೋರಿ ನೀಡುವಂತೆ ರವಿಕುಮಾರ್ ಕರ್ನಾಟಕ ಅಂಗಾಂಗ ಕಸಿ ಪ್ರಾದೇಶಿಕ ಸಮನ್ವಯ ಸಮಿತಿಯ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆದಾಖಲೆಗಳು ಸಮರ್ಪಕವಾಗಿಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.