‘ಪಾಕಿಸ್ಥಾನ ಜಿಂದಾಬಾದ್’ ಎಂದ Whats App ಅಡ್ಮಿನ್ ಗಳಿಗೆ ಜಾಮೀನಿಲ್ಲ
Team Udayavani, Jan 29, 2019, 11:46 AM IST
ಬೆಂಗಳೂರು: ವಾಟ್ಸಾಪ್ ಗ್ರೂಪೊಂದರಲ್ಲಿ ‘ಪಾಕಿಸ್ಥಾನ ಜಿಂದಾಬಾದ್’ ಎಂಬ ಸಂದೇಶವನ್ನು ಹರಿಯ ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರಿಗೆ ಜಾಮೀನು ನೀಡಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ಈ ಸಂದೇಶ ಸಣ್ಣದಾಗಿದ್ದರೂ ಅದರ ಪರಿಣಾಮ ತೀವ್ರ ಸ್ವರೂಪದ್ದಾಗಿರಬಹುದಾದ ಸಾಧ್ಯತೆಗಳಿರುವುದರಿಂದ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂಬ ಅಭಿಪ್ರಾಯವನ್ನು ನ್ಯಾಯಮೂರ್ತಿ ಸುಧೀಂದ್ರ ರಾವ್ ನೇತೃತ್ವದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.
ಆಗಸ್ಟ್ 14ರಂದು ವಾಟ್ಸಾಪ್ ಗ್ರೂಪೊಂದರಲ್ಲಿ ‘ಪಾಕಿಸ್ಥಾನ ಜಿಂದಾಬಾದ್’ ಎಂಬ ಸಂದೇಶವನ್ನು ಹಾಕಿದ್ದಕ್ಕೆ ಸಂಬಂಧಪಟ್ಟಂತೆ ಹನುಮ ಗೌಡ ಎಂಬವರು ಕೊಪ್ಪಳ ಪೊಲೀಸ್ ಠಾಣೆಯಲ್ಲಿ ರಾಜದ್ರೋಹದ ದೂರು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಪೊಲೀಸರು ಮುಸ್ತಫಾ, ಶಬ್ಬೀರ್ ಮತ್ತು ಚಾಂದ್ ಪಾಷಾ ಎಂಬವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಜಾಮೀನು ನಿರಾಕರಿಸಿರುವುದರಿಂದ ಮೂವರು ಆರೋಪಿಗಳಿಗೆ ಸದ್ಯಕ್ಕೆ ಜೈಲುವಾಸ ಖಾಯಂ ಆದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.