ಎಚ್‌ಡಿಕೆ ಬಂಧನಕ್ಕೆ ಬಲವಾದ ಸಾಕ್ಷ್ಯ ಕೇಳಿದ ಹೈಕೋರ್ಟ್
Team Udayavani, Jun 29, 2017, 3:45 AM IST
ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿಯನ್ನು ಬಂಧಿಸಿಯೇ ವಿಚಾರಣೆಗೊಳ ಪಡಿಸಲು ಪುಷ್ಠಿàಕರಿಸುವಂತಹ ಬಲವಾದ ಅಂಶಗಳ ಪಟ್ಟಿ ನೀಡುವಂತೆ ವಿಶೇಷ ತನಿಖಾ
ತಂಡ(ಎಸ್‌ಐಟಿ)ಕ್ಕೆ ತಾಕೀತು ಮಾಡಿರುವ ಹೈಕೋರ್ಟ್, ಕುಮಾರ ಸ್ವಾಮಿ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ಜುಲೈ ಕೊನೆಯ ವಾರದವರೆಗೆ ವಿಸ್ತರಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸದಸ್ಯ ಪೀಠಕ್ಕೆ, ಜಂತಕಲ್ ಪ್ರಕರಣದ ಕೇಸ್ ಡೈರಿಯನ್ನು ಎಸ್‌ಐಟಿ ಪರ ವಿಶೇಷ ಅಭಿಯೋಜಕ ಪಿ. ಗೋವಿಂದನ್ ಸಲ್ಲಿಸಿ ವಾದ ಮಂಡಿಸಿದರು.
ಈ ಪ್ರಕರಣ ವೈಟ್ ಕಾಲರ್ ಅಕ್ರಮದಂತೆ ನಡೆದಿದೆ. ಜೊತೆಗೆ ಆರ್ಥಿಕ ಅಪರಾಧವಾಗಿಯೂ ಪರಿಗಣನೆಗೆ ಬರಲಿದೆ. ಹೀಗಾಗಿ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಾರದು ಎಂದು ಕೋರಿದರು.ಇದಕ್ಕೆ ಆಕ್ಷೇಪ
ವ್ಯಕ್ತಪಡಿಸಿದ ಕುಮಾರಸ್ವಾಮಿ ಪರ ವಕೀಲ ಹಸ್ಮತ್ ಪಾಷಾ, ಒಂದು ವೇಳೆ ಈ ಪ್ರಕರಣದಲ್ಲಿ ಅರ್ಜಿದಾರರ ಬಂಧನವಾದರೇ ಅವರ ಪಕ್ಷಕ್ಕೆ ಹಾಗೂ ವ್ಯಕ್ತಿಗತವಾಗಿ ಬಹುದೊಡ್ಡ ನಷ್ಟವಾಗಲಿದೆ. ಅದನ್ನು ತುಂಬಿಕೊಡಲು ಯಾರಿದಂದಲೂ ಸಾಧ್ಯವಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದರು.
ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಜಂತಕಲ… ಕಂಪೆನಿಗೆ ಪರವಾನಗಿ ಕೊಡಿಸಿದ ಆರೋಪ ಸಂಬಂಧವೇ ಈ ಹಿಂದೆ ದಾಖಲಿಸಿದ್ದ ಪ್ರಕರಣಗಳ ತನಿಖೆಯನ್ನು ಆಳವಾಗಿ ನಡೆಸದೇ, ಹೊಸ ಎಫ್ಐಆರ್ ಏಕೆ ಪಟ್ಟಿ ಮಾಡಿಕೊಡಿ ಎಂದು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿತು. ಇದಕ್ಕೆ ಉತ್ತರಿಸಿದ ಎಸ್‌ಐಟಿ ಪರ ವಕೀಲರು, ಜುಲೈ ಕೊನೆಯ ವಾರದಲ್ಲಿ ಸ್ಪಷ್ಟನೆ ಪಡೆದು ತಿಳಿಸಲಾಗುವುದು ಎಂದು ಕಾಲಾವಕಾಶ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.