ಮುಂದಿನ ವರ್ಷದಿಂದ ಸುರಕ್ಷೆ : ಖಾಸಗಿ ಶಾಲೆಗಳು ನಿರಾಳ
ಸರಕಾರಿ ಶಾಲೆಗಳಿಗೂ ಷರತ್ತು ಅನ್ವಯಿಸುವಂತೆ ಹೈಕೋರ್ಟ್ ಸೂಚನೆ
Team Udayavani, Dec 3, 2024, 6:11 AM IST
ಬೆಂಗಳೂರು: ಮಾನ್ಯತೆ ಪಡೆದುಕೊಳ್ಳಲು ಹಾಗೂ ಮಾನ್ಯತೆ ನವೀಕರಣ ಮಾಡಿಕೊಳ್ಳಲು ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷೆ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳುವುದು ಸೇರಿದಂತೆ ಕೆಲವು ಷರತ್ತುಗಳ ಪಾಲನೆಗೆ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಮುಂದಿನ ಶೈಕ್ಷಣಿಕ ವರ್ಷದವರೆಗೆ ಕಾಲಾವಕಾಶವನ್ನು ಹೈಕೋರ್ಟ್ ನೀಡಿದೆ.
ಅಲ್ಲದೆ ಖಾಸಗಿ ಶಾಲೆಗಳಿಗೆ ಕಡ್ಡಾಯಗೊಳಿ ಸಿರು ವುದು ಸರಕಾರಿ ಶಾಲೆಗಳಿಗೂ ಅನ್ವಯವಾಗುತ್ತದೆ. ಕಟ್ಟಡದ ಸುರಕ್ಷೆ ಮತ್ತು ಅಗ್ನಿ ಸುರಕ್ಷಾ ಕ್ರಮಗಳನ್ನು ಖಾಸಗಿ ಶಾಲೆಗಳಲ್ಲಿ ಬಯಸುವ ಸರಕಾರ, ಅದನ್ನು ತನ್ನ ಅಧೀನದಲ್ಲಿರುವ ಸರಕಾರಿ ಶಾಲೆಗಳಲ್ಲೂ ಬಯಸ ಬೇಕು. ಈ ವಿಚಾರದಲ್ಲಿ ಸರಕಾರಿ ಶಾಲೆ ಗಳಿಗೆ ವಿನಾಯಿತಿ ಸಲ್ಲದು. ಶಾಲೆಗಳಲ್ಲಿ ಕಟ್ಟಡ ಸುರಕ್ಷೆ, ಅಗ್ನಿ ಸುರಕ್ಷತೆ ಸೇರಿದಂತೆ ಉಳಿದ ಷರತ್ತುಗಳ ಪಾಲನೆ, ಕ್ರಮಗಳ ಅಳವಡಿಕೆಯಲ್ಲಿ ಸರಕಾರ ಮಾದರಿ ನಾಗರಿಕ’ನಾಗಿ ನಡೆದುಕೊಳ್ಳಬೇಕು ಎಂದೂ ಹೈಕೋರ್ಟ್ ಹೇಳಿದೆ.
ಶಾಲೆಗಳಿಗೆ ಮಾನ್ಯತೆ ಪಡೆದುಕೊಳ್ಳಲು ಅಥವಾ ಮಾನ್ಯತೆ ನವೀಕರಣಕ್ಕೆ ಕಟ್ಟಡ ಸುರಕ್ಷೆ ಹಾಗೂ ಅಗ್ನಿ ಸುರಕ್ಷೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು 2022ರ ಜೂನ್ 6ರಂದು ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆ ಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಸಲ್ಲಿಸಿದ ಅರ್ಜಿಯನ್ನು ಇತ್ಯರ್ಥಪಡಿಸಿದ ನ್ಯಾ| ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು