362 ಅಭ್ಯರ್ಥಿಗಳ ನೇಮಕ ಸಿಂಧು: ಕಾಯ್ದೆಗೆ ಮಧ್ಯಾಂತರ ತಡೆ
Team Udayavani, Mar 23, 2022, 10:47 PM IST
ಬೆಂಗಳೂರು: 2011ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗೆ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳ ನೇಮಕಾತಿಯನ್ನು ಸಿಂಧುಗೊಳಿಸುವ ಸರಕಾರದ ಪ್ರಯತ್ನಕ್ಕೆ ತಾತ್ಕಾಲಿಕ ಹಿನ್ನಡೆ ಆಗಿದ್ದು, ಕಾಯ್ದೆ ಜಾರಿಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಈ ವಿಚಾರವಾಗಿ ಎ.ಟಿ. ಶ್ರೀನಿವಾಸ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದರ್ ಹಾಗೂ ನ್ಯಾ| ಎಂ.ಜಿ.ಎಸ್. ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ 2011ನೇ ನಡೆಸಿದ್ದ ಪರೀಕ್ಷೆಯಲ್ಲಿ ಅಂತಿಮ ಪಟ್ಟಿಯಲ್ಲಿದ್ದ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸಿ ನೇಮಕ ಆದೇಶ ನೀಡುವ ಸಂಬಂಧ ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಮಸೂದೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.