ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಅನ್ಯಾಯ ಆರೋಪ: ಸರ್ಕಾರಕ್ಕೆ ನೋಟಿಸ್
Team Udayavani, Nov 23, 2022, 6:20 AM IST
ಬೆಂಗಳೂರು: “ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆ’ಯ ಕಾಮಗಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿ ರಾಜ್ಯದ ಉಳಿದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಟೆಂಡರ್ ಪ್ಯಾಕೇಜ್ ಮೊತ್ತಕ್ಕೆ ಮಿತಿ ಹೇರಿದ್ದರಿಂದ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್. ಮಹದೇವಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ, ಆರ್ಥಿಕ ಇಲಾಖೆ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿ.13ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದ ಮಂಡಿಸಿದರು.
ಸರ್ಕಾರದ ಟೆಂಡರ್ಗಳಲ್ಲಿ 50 ಲಕ್ಷದವರೆಗಿನ ಕಾಮಗಾರಿಗಳಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಶೇ.24ರಷ್ಟು ಮೀಸಲಾತಿ ನೀಡಿ 2017ರಲ್ಲಿ ಕರ್ನಾಟಕ ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಆದರೆ, “ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಬಿಬಿಎಂಪಿಗೆ 6 ಸಾವಿರ ಕೋಟಿ ರೂ. ಅನುದಾನ ನೀಡಿ ಕಾಮಗಾರಿಗಳಿಗೆ ಟೆಂಡರ್ ಕರೆಯಲು ಪ್ಯಾಕೇಜ್ ಮೊತ್ತ 10 ಕೋಟಿ ರೂ. ನಿಗದಿಪಡಿಸಲಾಗಿದೆ. ಅದೇ ರೀತಿ ರಾಜ್ಯದ ಉಳಿದ ನಗರ ಸ್ಥಳೀಯ ಸಂಸ್ಥೆಗಳಿಗೆ 3,885 ಕೋಟಿ ಅನುದಾನ ನೀಡಿ ನಗರಸಭೆ ವ್ಯಾಪ್ತಿಯಲ್ಲಿ 1 ಕೋಟಿ, ಪುರಸಭೆ ವ್ಯಾಪ್ತಿಯಲ್ಲಿ 50 ಲಕ್ಷ ಹಾಗೂ ಪಟ್ಟಣ ಪಂಚಾಯಿತಿಗಳಿಗೆ 25 ಲಕ್ಷ ರೂ. ತಾಲೂಕು ಮಟ್ಟದ ಕಾಮಗಾರಿಗಳಿಗೆ 1 ಕೋಟಿ ರೂ.ಪ್ಯಾಕೇಜ್ ಮೊತ್ತ ನಿಗದಿಪಡಿಸಲಾಗಿದೆ. ಇದರಿಂದಾಗಿ ಎಸ್ಸಿ-ಎಸ್ಟಿ ಗುತ್ತಿಗೆದಾರರು ಕಾಮಗಾರಿಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.