NEP ಬದಲು ಎಸ್ಇಪಿ ಸರಕಾರಕ್ಕೆ ಹೈಕೋರ್ಟ್ ನೋಟಿಸ್
Team Udayavani, Jul 12, 2024, 1:28 AM IST
ಬೆಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ “ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಕೀಲರಾದ ಗಿರೀಶ್ ಭಾರದ್ವಾಜ್ ಮತ್ತು ಆರ್. ಆನಂದ್ ಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಸೇರಿ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 1ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.