ಮಕ್ಕಳ ಅಪೌಷ್ಟಿಕತೆ: ವಿಚಾರಣೆ ಮುಂದಕ್ಕೆ
Team Udayavani, Jan 28, 2022, 6:34 AM IST
ಬೆಂಗಳೂರು: ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮೂರು ವಾರಗಳಲ್ಲಿ ಮಾಹಿತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿ 2011ರಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ಹಾಗೂ ನ್ಯಾ| ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಕೇಂದ್ರ ಸರಕಾರದ ಪರ ವಕೀಲರು ವಾದ ಮಂಡಿಸಿ, ಕರ್ನಾಟಕಕ್ಕೆ ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವಾಲಯದಿಂದ ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಹಾಗಾಗಿ, ಕಾಲಾವಕಾಶ ಬೇಕು ಎಂದು ಕೋರಿದ್ದು, ಹೈಕೋರ್ಟ್ ಮೂರು ವಾರ ಕಾಲಾವಕಾಶ ನೀಡಿತು.
ಅಲ್ಲದೆ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ ಗೌಡ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಮಧ್ಯಾಂತರ ಶಿಫಾರಸುಗಳನ್ನು ಜಾರಿಗೆ ತಂದಿರುವ ಬಗ್ಗೆ ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಫೆ.18ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.