High Court: ಪ್ರಚೋದನಕಾರಿ ಹೇಳಿಕೆ; ಬಸವರಾಜ ಬೊಮ್ಮಾಯಿ ಪ್ರಕರಣಕ್ಕೆ ಹೈಕೋರ್ಟ್ ತಡೆ
Team Udayavani, Nov 14, 2024, 12:00 AM IST
ಬೆಂಗಳೂರು: ವಕ್ಫ್ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ಅದರ ಸಂಬಂಧ ನೀಡಿರುವ ಪೊಲೀಸ್ ನೋಟಿಸ್‌ಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ತಮ್ಮ ವಿರುದ್ಧ ಹಾವೇರಿ ಜಿಲ್ಲೆಯ ಸವಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ ನವೆಂಬರ್ 16ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೀಡಿರುವ ನೋಟಿಸ್ ರದ್ದುಪಡಿಸುವಂತೆ ಕೋರಿ ಬಸವರಾಜ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಬಸವರಾಜ ಬೊಮ್ಮಾಯಿ ಪರ ವಕೀಲ ಶಿವಪ್ರಸಾದ್ ಶಾಂತನಗೌಡರ್ ವಕಾಲತ್ತು ವಹಿಸಿದ್ದರು.
ವಿಚಾರಣೆ ವೇಳೆ ಸಂಸದ ಬಸವರಾಜ ಬೊಮ್ಮಾಯಿ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ಅರ್ಜಿದಾರರು ಯಾವುದೇ ಆಕ್ಷೇಪಾರ್ಹ ಮಾತುಗಳನ್ನು ಆಡದಿದ್ದರೂ, ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೇರೆಯವರು ಹೇಳಿರುವುದು ಅರ್ಜಿದಾರರಿಗೆ ಅನ್ವಯಿಸುವುದು ಬೇಡ ಎಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
MUST WATCH
ಹೊಸ ಸೇರ್ಪಡೆ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್ ಹಸೀನಾ ಆಶ್ರಯ ಪಡೆದು 100 ದಿನ!
BGT: ವಿರಾಟ್ ಬಗ್ಗೆ ಆಸೀಸ್ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್ ಸಾಮ್ರಾಜ್ಯದ ಕಥೆ
Kanguva: ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್ ಮೂವಿ ಲೀಕ್
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.