ಕೇಂದ್ರದ ಆದೇಶದ ವಿರುದ್ಧದ ಟ್ವಿಟರ್ ಮನವಿ ತಿರಸ್ಕರಿಸಿದ ಹೈಕೋರ್ಟ್; 50 ಲಕ್ಷ ರೂ ದಂಡ
Team Udayavani, Jun 30, 2023, 12:20 PM IST
ಬೆಂಗಳೂರು: ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳನ್ನು ರದ್ದು ಮಾಡುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ಟ್ವಿಟ್ಟರ್ ಗೆ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ಇಂದು ಟ್ವಿಟ್ಟರ್ ಅರ್ಜಿಯನ್ನು ವಜಾ ಮಾಡಿದೆ. ಅಲ್ಲದೆ ಟ್ವಿಟ್ಟರ್ ಗೆ 50 ಲಕ್ಷ ರೂ ದಂಡ ವಿಧಿಸಲಾಗಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeiTY) ತನಗೆ ಹೊರಡಿಸಿದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಂಸ್ಥೆಯು ಕೋರ್ಟ್ ಮೆಟ್ಟಿಲೇರಿತ್ತು.
ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಶುಕ್ರವಾರ ಬೆಳಗ್ಗೆ ಪ್ರಕಟಿಸಿತು. ಟ್ವೀಟ್ ಗಳನ್ನು ಮತ್ತು ಟ್ವಿಟ್ಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸರ್ಕಾರದ ಪರ ವಕೀಲರ ವಾದದಿಂದ ಪೀಠಕ್ಕೆ ಮನವರಿಕೆಯಾಗಿದೆ ಎಂದು ಹೇಳಿದೆ.
ಫೆಬ್ರವರಿ 2021 ಮತ್ತು ಫೆಬ್ರವರಿ 2022 ರ ನಡುವೆ 39 ಯುನಿಫಾರ್ಮ್ ರಿಸೋರ್ಸ್ ಲೊಕೇಟರ್ ಗಳನ್ನು (URL) ನಿರ್ಬಂಧಿಸಲು ಕೇಂದ್ರವು ಟ್ಟಿಟ್ಟರ್ ಗೆ ತಿಳಿಸಿತ್ತು.
ಇದನ್ನೂ ಓದಿ:Stock: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸಾರ್ವಕಾಲಿಕ ಗರಿಷ್ಠ: ಇವು…ಲಾಭಗಳಿಸಿದ ಷೇರುಗಳು
ಕಳೆದ ವರ್ಷ, ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳ ಅಡಿಯಲ್ಲಿ ತನ್ನ ಪ್ಲಾಟ್ ಫಾರ್ಮ್ ನಿಂದ ವಿಷಯವನ್ನು ತೆಗೆದುಹಾಕುವ ಕೇಂದ್ರದ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿತ್ತು.
2022 ರಲ್ಲಿ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಖಾತೆಯನ್ನು ನಿರ್ಬಂಧಿಸಲು ಕೇಂದ್ರವು ಹೊರಡಿಸಿದ ಆದೇಶಕ್ಕೆ ಕಾರಣಗಳನ್ನು ಪಟ್ಟಿ ಮಾಡಬೇಕು ಎಂದು ಟ್ವಿಟರ್ ಹೈಕೋರ್ಟ್ ಗೆ ತಿಳಿಸಿದೆ. ಅಗತ್ಯವಿದ್ದಲ್ಲಿ, ಆದೇಶವನ್ನು (ಐಟಿ ಕಾಯಿದೆ, 2000 ರ ಸೆಕ್ಷನ್ 69 ಎ ಅಡಿಯಲ್ಲಿ ಹೊರಡಿಸಲಾಗಿದೆ) ಪ್ರಶ್ನಿಸಲು ಒಂದು ಮಾನದಂಡವನ್ನು ಜಾರಿಗೆ ತರಬೇಕು ಎಂದು ಅದು ಒತ್ತಾಯಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.