ವಲಸೆ ಕಾರ್ಮಿಕರ ಮಾಹಿತಿ ಕೇಳಿದ ಹೈಕೋರ್ಟ್
Team Udayavani, May 13, 2020, 7:08 AM IST
ಬೆಂಗಳೂರು: ಲಾಕ್‌ಡೌನ್‌ನಿಂದ ಕರ್ನಾಟಕದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯಗಳ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ಕಳುಹಿಸಿಕೊಡಲು ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ಸೂಚನೆ ನೀಡಿತು. ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ಕಳುಹಿಸಲು ಯಾವ ವ್ಯವಸ್ಥೆ ಮಾಡಲಾಗಿದೆ, ಈವರೆಗೂ ಕರ್ನಾಟಕದಿಂದ ಎಷ್ಟು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಿದ್ದಾರೆ. ಇನ್ನೂ ಹೋಗುವವರ ಸಂಖ್ಯೆ ಎಷ್ಟಿದೆ, ಅವರ ಪ್ರಯಾಣ ವೆಚ್ಚವನ್ನು ಹೇಗೆ ಭರಿಸಲಾಗುತ್ತದೆ,
ಒಂದು ವೇಳೆ ವಾಪಸ್ ಮರಳಲು ಬಯಸಿದರೆ ಅಂತಹ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಎಂದು ರಾಜ್ಯ ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿತು. ಜತೆಗೆ, ನಮ್ಮ ಮೆಟ್ರೋ ರೈಲು ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದ್ದು, ಆ ವಿಚಾರ ಏನಾಯಿತು? ಮಾ.24ರವರೆಗೆ ಬೊಮ್ಮನಹಳ್ಳಿ ಕ್ಯಾಂಪಿನಲ್ಲಿ ಎಷ್ಟು ಕಾರ್ಮಿಕರಿದ್ದರು? ಆ ಕ್ಯಾಂಪ್‌ನಿಂದ ಈವರೆಗೆ ಎಷ್ಟು ಜನ ತೆರಳಿದ್ದಾರೆ ಎಂಬ ಬಗ್ಗೆಯೂ ಸಂಪೂರ್ಣ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮೇ 18ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.