ಪೊಲೀಸರಿಗೆ ಅತ್ಯುನ್ನತ ತರಬೇತಿಗೆ ಯತ್ನ


Team Udayavani, Feb 6, 2019, 1:55 AM IST

85.jpg

ಧಾರವಾಡ: ದೇಶ-ವಿದೇಶಗಳಲ್ಲಿ ಪೊಲೀಸರಿಗೆ ನೀಡುವ ತರಬೇತಿಯನ್ನು ನಮ್ಮ ಪೊಲೀಸರಿಗೂ ನೀಡುವ ಮೂಲಕ ತರಬೇತಿ ಪಥ ಬದಲಾಯಿಸಲಾಗುತ್ತಿದ್ದು, ಇದಕ್ಕಾಗಿ ಹಿರಿಯ ಅಧಿಕಾರಿಗಳ ನೇತೃತ್ವದ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ಗ‌ಳ ನಿರ್ಗಮನ ಪಥ ಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೇರೆ ಇಲಾಖೆಗಳ ಸಿಬ್ಬಂದಿಗೆ ದೊರಕುವ ವೇತನ-ಸೌಲಭ್ಯಗಳು ಪೊಲೀಸರಿಗಿಲ್ಲ. ಈ ಹಿನ್ನೆಲೆಯಲ್ಲಿ ಔರಾದಕರ ಸಮಿತಿಯ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡುವ ಮೂಲಕ ಪೊಲೀಸರಿಗೆ ಸಮಾನ ವೇತನ-ಸೌಲಭ್ಯ ನೀಡಲು ಬದ್ಧವಾಗಿದೆ. ಈ ಕುರಿತು ಮುಖ್ಯಮಂತ್ರಿಗಳೂ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಪಿಎಸ್‌ಐ ನೇಮಕಕ್ಕೆ ತೀರ್ಮಾನ: ಸಾಮಾನ್ಯವಾಗಿ ಪೊಲೀಸ್‌ ಠಾಣೆಗಳಲ್ಲಿ ಒಬ್ಬರೇ ಪಿಎಸ್‌ಐ ಎಲ್ಲವನ್ನೂ ನೋಡಿಕೊಳ್ಳುವ ಕಾರಣದಿಂದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೆಲಸ ಹಂಚಿಕೆ ಮಾಡುವ ಮೂಲಕ ಪೊಲೀಸ್‌ ಠಾಣೆಗಳನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಲಾಗುವುದು. ಇದರೊಂದಿಗೆ ದೂರು ಸ್ವೀಕರಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ತೀರ್ಮಾನಿಸಲಾಗಿದೆ. ಪ್ರತಿ ಪೊಲೀಸ್‌ ಠಾಣೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಲು ಹಾಗೂ ಅಪರಾಧ ಪ್ರಕರಣಗಳ ತನಿಖೆಗೆಂದು ತಲಾ ಒಂದೊ ಂದು ಪಿಎಸ್‌ಐ ನೇಮಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು.

ಪ್ರಶಸ್ತಿ ಪ್ರದಾನ: ಇಲ್ಲಿಯ ಕಲಘಟಗಿ ರಸ್ತೆಯಲ್ಲಿನ ಪೊಲೀಸ್‌ ತರಬೇತಿ ಶಾಲೆಯಲ್ಲಿ ಮಂಗಳವಾರ ನಡೆದ 4ನೇ ತಂಡದ ಸಿವಿಲ್‌ ಪೊಲೀಸ್‌ ಕಾನ್ಸ್‌ ಟೇಬಲ್‌ಗ‌ಳ ನಿರ್ಗಮನ ಪಥ ಸಂಚಲನದ ವೇಳೆ ಅತ್ಯುತ್ತಮ ಸಾಧನೆ ತೋರಿದವರಿಗೆ ಪ್ರಶಸ್ತಿ ನೀಡಿ ಗೌರವಿಸ ಲಾಯಿತು. ಕಾರವಾರ ಜಿಲ್ಲೆಯ ನಾರಾಯಣ ಎ.ಎಸ್‌.ಅವರಿಗೆ ಒಳಾಂಗಣ ವಿಭಾಗದಲ್ಲಿ ಪ್ರಥಮ, ಮೈಸೂರಿನ ನಾಗನಾಯಕ್‌ ಸಿ ಅವರಿಗೆ ದ್ವಿತೀಯ, ಹು-ಧಾ ಜ್ಞಾನೇಶ್ವರ ಹಿರೇಮಠಗೆ ತೃತೀಯ ಸ್ಥಾನ ನೀಡಲಾಯಿತು. ಹೊರಾಂಗಣ ವಿಭಾಗದಲ್ಲಿ ಚಿತ್ರದುರ್ಗದ ಅಶೋಕ ಎ,ಹು-ಧಾ ಮಹೇಶ ಹೆಸರೂರ, ಕಾರವಾರದ ನಾರಾಯಣ ಎ.ಎಸ್‌. ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದರು. ಪೈರಿಂಗ್‌ ವಿಭಾಗದಲ್ಲಿ ಮಂಗಳೂರಿನ ರವಿಕುಮಾರ, ಕಾರವಾರದ ಕರಿಯಣ್ಣ, ಬೆಳಗಾವಿಯ ವಿಠuಲ ಮೊದಲ ಮೂರು ಪ್ರಶಸ್ತಿ ಪಡೆದರು. ಹಾಗೆಯೇ ಕಾರವಾರದ ನಾರಾಯಣ ಎಂ.ಎಸ್‌.ಅವರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಲಿಂಗಾಯತ ಧರ್ಮ ನನ್ನ ಅಸ್ಮಿತೆ

ಧಾರವಾಡ: ಲಿಂಗಾಯತ ಧರ್ಮ ನನ್ನ ಅಸ್ಮಿತೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ಮಂಗಳವಾರ ಅವರು ಮುರುಘಾಮಠಕ್ಕೆ ಭೇಟಿ ನೀಡಿದರು. ಅವರನ್ನು ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸತ್ಕರಿಸಿದರು. ಈ ವೇಳೆ ಜತೆಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರೊಂದಿಗೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಕುರಿತಂತೆ ಕೆಲ ಹೊತ್ತು ಸಚಿವರು ಚರ್ಚಿಸಿದರು. ಇದಾದ ಬಳಿಕ ಶ್ರೀಮಠದಲ್ಲೇ ಮಧ್ಯಾಹ್ನ ಭೋಜನ ಸವಿದರು. ಈ ವೇಳೆ ಮಾತನಾಡಿದ ಸಚಿವರು, ಲಿಂಗಾಯತ ಧರ್ಮದ ವಿಚಾರ, ಹೋರಾಟ ಜೀವಂತವಾಗಿದೆ. ಈ ಹೋರಾಟ ಈಗ ಕಾನೂನಾತ್ಮಕವಾಗಿ ಮುಂದುವರಿಯುತ್ತದೆ.  ಾಜ್ಯದ ಗೃಹ ಸಚಿವನಾಗಿ ನಾನು ಈ ಹೋರಾಟದಲ್ಲಿ ಭಾಗಿಯಾಗಲ್ಲ. ಆದರೆ ಲಿಂಗಾಯತ ಧರ್ಮ ನನ್ನ ಅಸ್ಮಿತೆ ಆಗಿದೆ ಎಂದರು.

ಶೀಘ್ರವೇ ಕಂಪ್ಲಿ ಶಾಸಕ ಗಣೇಶ ಬಂಧನ

ಹುಬ್ಬಳ್ಳಿ: ಶಾಸಕರಾದ ಗಣೇಶ ಹಾಗೂ ಆನಂದ್‌ ಸಿಂಗ್‌ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಗಣೇಶ ಬಂಧನಕ್ಕೆ ವ್ಯಾಪಕ ಪ್ರಯತ್ನ ನಡೆಸಲಾಗುತ್ತಿದೆ. ಶೀಘ್ರವೇ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಗಣೇಶ ಅವರು ಆನಂದ ಸಿಂಗ್‌ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅವರ ಮೇಲೆ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಮೊಬೈಲ್‌ ಸ್ವಿಚ್ ಆಫ್‌ ಮಾಡಿಕೊಂಡು ಅಜ್ಞಾತ ಸ್ಥಳದಲ್ಲಿದ್ದಾರೆ. ಅವರ ಬಂಧನಕ್ಕೆ ಪೊಲೀಸ್‌ ಹಾಗೂ ಗೃಹ ಇಲಾಖೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾನೂನಿಗಿಂತ ದೊಡ್ಡವರ್ಯಾರು ಇಲ್ಲ. ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದರು. ಬಿಜೆಪಿಗೆ ಹೋಗಲ್ಲ: ಯಾವ ಶಾಸಕರೂ ರಾಜೀನಾಮೆ ಕೊಟ್ಟು ಬಿಜೆಪಿ ಸೇರಲ್ಲ. ರಮೇಶ ಜಾರಕಿಹೊಳಿ, ನಾಗೇಂದ್ರ, ಉಮೇಶ ಜಾಧವ ಸೇರಿ ಎಲ್ಲರೂ ನಮ್ಮ ಜತೆ ಇದ್ದಾರೆ. ಬಿಜೆಪಿಯವರು ಅಧಿಕಾರ ಪಡೆಯುತ್ತೇವೆಂದು ಹಗಲು ಕನಸು ಕಾಣುತ್ತಿದ್ದಾರೆ. ಅದ್ಯಾವುದೂ ಈಡೇರಲ್ಲ ಎಂದರು.

ಟಾಪ್ ನ್ಯೂಸ್

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.