ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸೌಲಭ್ಯ: ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಸೂಚನೆ


Team Udayavani, Dec 16, 2021, 11:00 PM IST

Untitled-1

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಕೋರಿ ಎಸಿಬಿ ಸಲ್ಲಿಸಿರುವ ಮನವಿ ಬಗ್ಗೆ ಎರಡು ವಾರದಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಪ್ರಕರಣದ ತನಿಖೆ ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ತಮಿಳುನಾಡಿನ ಶಿಕ್ಷಣ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್‌. ಗೀತಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಿ, ತನಿಖೆಯನ್ನು ಎಸಿಬಿ ಪೂರ್ಣಗೊಳಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಪ್ರಾಸಿಕ್ಯೂಷನ್‌ ನಡೆಸಲು ಪೂರ್ವಾನುಮತಿ ಕೋರಿ ತನಿಖಾ ವರದಿಯನ್ನು ಸಕ್ಷಮ ಪ್ರಾಧಿಕಾರವಾದ ಗೃಹ ಇಲಾಖೆ ಕಾರ್ಯದರ್ಶಿಗೆ 2021ರ ಜುಲೈ ರವಾನಿಸಿದೆ. 20 ದಿನಗಳ ಹಿಂದೆ ಆ ವರದಿಯನ್ನು ಕಾರ್ಯದರ್ಶಿಗಳು ಪರಿಶೀಲನೆ ನಡೆಸಿ, ಅನುಮೋದನೆಗಾಗಿ ಕಡತವನ್ನು ಗೃಹ ಸಚಿವರಿಗೆ ಸಲ್ಲಿಸಿದ್ದಾರೆ. ಗೃಹ ಸಚಿವರು ಅನುಮೋದನೆ ನೀಡಬೇಕಿದೆ.   ಪೂರ್ವಾನುಮತಿ ದೊರೆಯದೆ  ದೋಷಾರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಾಧ್ಯವಾಗುವುದಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಈ ಅರ್ಜಿಯನ್ನು 2021 ಜ.11ರಂದು ಹೈಕೋರ್ಟ್‌ ಇತ್ಯರ್ಥಪಡಿಸಿತ್ತು. ಅಂತಿಮ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ತನಿಖಾ ವರದಿ ಸಲ್ಲಿಸಲು ಸೆ.7ರಂದು ಮತ್ತೆ 30 ದಿನ ಕಾಲಾವಕಾಶ ನೀಡಿತ್ತು. ವರದಿ ಸಲ್ಲಿಸಲು ವಿಫ‌ಲವಾದರೆ ಗೃಹ ಇಲಾಖೆ ಕಾರ್ಯದರ್ಶಿ ವಿಚಾರಣೆಗೆ ಹಾಜರಾಗಿ ವಿವರಣೆ ನೀಡುವಂತೆಯೂ ನಿರ್ದೇಶಿಸಿತ್ತು. ಆದರೆ, ಈವರೆಗೂ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ತಿಳಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪೂರ್ವಾನುಮತಿ ಕೋರಿದ ಮನವಿ ಮೇಲೆ ನಿರ್ಧಾರ ಕೈಗೊಳ್ಳಲು ಎಷ್ಟು ಸಮಯ ಬೇಕಿದೆ ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿತು.

ಸರ್ಕಾರಿ ವಕೀಲರು ಉತ್ತರಿಸಿ, ಸದ್ಯ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಗೃಹ ಸಚಿವರು ಅಲ್ಲಿಯೇ ಇದ್ದಾರೆ. 10 ದಿನಗಳ ಬಳಿಕ ವಾಪಸ್ಸಾಗಲಿದ್ದು, ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.