ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ:ಶಿಕ್ಷೆ ರದ್ದುಪಡಿಸಲು ಹೈಕೋರ್ಟ್ ನಕಾರ
Team Udayavani, May 13, 2022, 7:30 AM IST
ಬೆಂಗಳೂರು: ನ್ಯಾಯಾಲಯದ ನಿರ್ಭಂಧಕಾಜ್ಞೆ ಇದ್ದರೂ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿದ ಆರೋಪದಲ್ಲಿ ಸೋಮನಾಥ್ ನಾಯಕ್ ಎಂಬುವರಿಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸುವಂತೆ ಕೋರಿ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ ನಾಯಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶಿಕ್ಷೆ ರದ್ದುಪಡಿಸಲು ನಿರಾಕರಿಸಿ ಆದೇಶಿಸಿತು.
ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಯಾವುದೇ ರೀತಿ ಮಾನಹಾನಿಕಾರಕ ಹೇಳಿಕೆ ನೀಡಬಾರದು, ಅಪಪ್ರಚಾರ ಮಾಡಬಾರದು ಎಂದು ಸಿವಿಲ್ ನ್ಯಾಯಾಲಯ ನಿರ್ಬಂಧಕಾಜ್ಞೆ ವಿಧಿಸಿದ್ದರೂ, ಅರ್ಜಿದಾರರು ಅದನ್ನು ಮೀರಿ ನಡೆದುಕೊಂಡಿರುವುದು ಸ್ಪಷ್ಟವಾಗಿದೆ. ಮೇಲಾಗಿ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳಲು ಅರ್ಜಿದಾರರು ವಿಫಲರಾಗಿದ್ದಾರೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂ ಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಮತ್ತು ಅಪಪ್ರಚಾರ ಮಾಡಿರುವುದು ಕ್ಷಮಾರ್ಹವಲ್ಲ. ಅಲ್ಲದೆ, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸುವ ಯಾವುದೇ ಕಾರಣವೂ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಶಿಕ್ಷೆ ರದ್ದುಪಡಿಸಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿತು.
ಪ್ರಕರಣದ ಹಿನ್ನೆಲೆ:
ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವರದಿ ಮಾಡದಂತೆ, ಅಪಪ್ರಚಾರ ಕೈಗೊಳ್ಳದಂತೆ 2013ರಲ್ಲಿ ಡಾ. ವೀರೇಂದ್ರ ಹೆಗ್ಗಡೆ ಬೆಳ್ತಂಗಡಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಾನಹಾನಿ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಆದೇಶ ಉಲ್ಲಂ ಸಿ ನಾಯಕ್ ಅಪಪ್ರಚಾರ ಮಾಡಿದ್ದಕ್ಕೆ 4.50 ಲಕ್ಷ ರೂ. ದಂಡ ವಿಧಿಸಿತ್ತು. ದಂಡ ಪಾವತಿಸಲು ವಿಫಲವಾದಲ್ಲಿ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿ ಸೋಮನಾಥ ನಾಯಕ್ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಲದ ಮೊರೆ ಹೋಗಿದ್ದರು. ನ್ಯಾಯಾಲಯ ಶಿಕ್ಷೆ ರದ್ದುಪಡಿಸಲು ನಿರಾಕರಿಸಿದ್ದರಿಂದ ನಾಯಕ್ ಹೈಕೋರ್ಟ್ ಮೆಟ್ಟಿಲೇರಿದ್ದರು. ತಾವು ದುರುದ್ದೇಶದಿಂದ ಹೇಳಿಕೆಗಳನ್ನು ನೀಡಿರಲಿಲ್ಲ. ಸದುದ್ದೇಶದಿಂದಲೇ ಹೇಳಿಕೆ ನೀಡಿ¨ªಾಗಿ ಸಮರ್ಥಿಕೊಳ್ಳಲು ಪ್ರಯತ್ನಿಸಿದ್ದರು. ಈ ವಾದವನ್ನು ಅಲ್ಲಗಳೆದಿರುವ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.