ಸದನದಲ್ಲಿ ಹಿಜಾಬ್ ಪ್ರಸ್ತಾವಕ್ಕೆ ಕೈ ಹಿಂದೇಟು
ಹೈಕೋರ್ಟ್ ತೀರ್ಪು ಆಧರಿಸಿ ಕ್ರಮಕ್ಕೆ ನಿರ್ಧಾರ; ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಚರ್ಚೆ
Team Udayavani, Feb 15, 2022, 7:10 AM IST
ಬೆಂಗಳೂರು: ಹಿಜಾಬ್ ಪ್ರಕರಣವನ್ನು ಪ್ರಸಕ್ತ ಅಧಿವೇಶನದಲ್ಲಿ ಪ್ರಸ್ತಾವಿಸದಿರಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಸದ್ಯ ಈ ಪ್ರಕರಣ ಹೈಕೋರ್ಟ್‌ನಲ್ಲಿದ್ದು, ತೀರ್ಪು ಬಂದ ಮೇಲೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಮುಂದಿನ ವಾರ ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಕೇಸರಿ ಧ್ವಜವೇ ರಾಷ್ಟ್ರಧ್ವಜ ಆಗಲಿದೆ ಎಂದಿರುವ ಸಚಿವ ಈಶ್ವರಪ್ಪ ಹೇಳಿಕೆ ಪ್ರಸ್ತಾವಿಸಿ ಅವರ ರಾಜೀನಾಮೆಗೆ ಒತ್ತಾ ಯಿಸಲು ಕೆಲವು ಶಾಸಕರು ಅಭಿಪ್ರಾಯ ಪಟ್ಟರು ಎಂದು ತಿಳಿದು ಬಂದಿದೆ.
ತಾರತಮ್ಯ ಪ್ರಸ್ತಾಪಕ್ಕೆ ನಿರ್ಧಾರ
ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವ ವಿಚಾರದಲ್ಲಿ ಸರಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಶಾಸಕರು ಆರೋಪಿಸಿದ್ದು, ಈ ಬಗ್ಗೆ ಸದನದಲ್ಲಿ ಹೋರಾಡಲು ತೀರ್ಮಾನಿಸಿದೆ. ಇದೇ ಸಂದರ್ಭದಲ್ಲಿ ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಸಹಿತ ಸರಕಾರದ ವಿವಿಧ ಹಗರಣಗಳ ಬಗ್ಗೆಯೂ ಸದನದಲ್ಲಿ ಚಾಟಿ ಬೀಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎನ್ನಲಾಗಿದೆ.
ಇದನ್ನೂ ಓದಿ:ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು : ಸಿಎಂ ಬೊಮ್ಮಾಯಿ
ಬೇಕೇ? ಬೇಡವೇ?
ಸುಪ್ರೀಂಕೋರ್ಟ್‌ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರೇ ಹಿಜಾಬ್ ಕುರಿತು ಅರ್ಜಿ ಸಲ್ಲಿಸಿರುವುದರಿಂದ ಅಧಿವೇಶನದಲ್ಲಿ ಪ್ರಸ್ತಾವಿಸುವ ಬಗ್ಗೆ ಸಿದ್ದರಾಮಯ್ಯ ಒಲವು ಹೊಂದಿದ್ದರಾದರೂ ಡಿ.ಕೆ.ಶಿವಕುಮಾರ್ ಸದ್ಯಕ್ಕೆ ಬೇಡ ಎಂದಿ ದ್ದರು. ಮುಸ್ಲಿಂ ಶಾಸಕರು ಹಿಜಾಬ್ ವಿಚಾರ ಪ್ರಸ್ತಾವಿಸೋಣ ಎಂದೇ ಪಟ್ಟು ಹಿಡಿದಿದ್ದು, ಶಾಸಕಾಂಗ ಪಕ್ಷದ ಸಭೆ ಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳೋಣ ಎಂದು ಹಿರಿಯ ಶಾಸ ಕರು ಸಲಹೆ ನೀಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.