ಹಿಜಾಬ್ ವಿದ್ಯಾರ್ಥಿನಿಯರ ಮೂಲಭೂತ ಹಕ್ಕು, ಎಲ್ಲೂ ಸಮವಸ್ತ್ರ ಕಡ್ಡಾಯ ಮಾಡಿಲ್ಲ: ಸಿದ್ದರಾಮಯ್ಯ
Team Udayavani, Feb 4, 2022, 11:35 AM IST
ಬೆಂಗಳೂರು: ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ. ಕುಂದಾಪುರದ ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು. ಅವರು ಯಾರೋ ಕೇಸರಿ ಶಾಲು ಹಾಕಿಕೊಂಡು ಬಂದಿದ್ದರಲ್ಲ, ಅವರ ವಿರುದ್ದ ಏನೋ ಕ್ರಮ? ಇದನ್ನೆಲ್ಲಾ ಬಿಜೆಪಿಗರು ಮಾಡಿಸುತ್ತಿದ್ದಾರೆ ಎಂದರು.
ವಿದ್ಯಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಏನಾಗುತ್ತದೆ ನೋಡೋಣ. ವೈಯಕ್ತಿಕವಾಗಿ ಹೇಳುವುದಾದರೆ ಹಿಜಾಬ್ ವಿದ್ಯಾರ್ಥಿನಿಯರ ಮೂಲಭೂತ ಹಕ್ಕು. ಅವರ ವಿದ್ಯಾಭ್ಯಾಸ ತಡೆಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದರು.
ಇದನ್ನೂ ಓದಿ:ಬೈಂದೂರಿನಲ್ಲೂ ಮುಂದುವರಿದ ಹಿಜಾಬ್-ಕೇಸರಿ ಶಾಲು ವಿವಾದ: ಕಾಲೇಜಿನೆದುರು ಪೋಷಕರ ಪ್ರತಿಭಟನೆ
ಕುಂದಾಪುರದ ಜೂನಿಯರ್ ಕಾಲೇಜು ನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗಳಿಗೆ ಪ್ರವೇಶ ನಿರಾಕರಣೆ ಮಾಡಿದ ಕಾರಣಕ್ಕಾಗಿ ಶಾಲೆಗೆ ಪೋಷಕರು ಮುತ್ತಿಗೆ ಹಾಕಿದ ಘಟನೆ ಶುಕ್ರವಾರ ನಡೆದಿದೆ. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಬೈಂದೂರಿನಲ್ಲೂ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಬಂದ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.