Shiradi Ghatನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪಾರು
Team Udayavani, Jul 18, 2024, 10:51 AM IST
ಸಕಲೇಶಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಹಿಂತಿರುಗಿ ಬರುವ ಸಂದರ್ಭ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.
ಈ ಸಂದರ್ಭದಲ್ಲಿ ಅಲ್ಲೇ ಇದ್ದ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕ ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.
ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿದ್ದು, ಮಣ್ಣು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.