ಹಿಂದುಳಿದವರು,ದಲಿತರು ಬಿಜೆಪಿ ಜತೆ ಇದ್ದಾರೆ: ಸಚಿವ ಕೆ.ಎಸ್.ಈಶ್ವರಪ್ಪ
ರಾಷ್ಟ್ರೀಯವಾದಿ ಮುಸಲ್ಮಾನರು ಕೂಡ ಭಾರತೀಯ ಜನತಾ ಪಾರ್ಟಿಯಲ್ಲಿದ್ದಾರೆ
Team Udayavani, Oct 27, 2021, 9:30 PM IST
ಬೆಂಗಳೂರು: ಒಂದು ಕಾಲದಲ್ಲಿ ಹಿಂದುಳಿದವರು,ದಲಿತರು ಮತ್ತು ಅಲ್ಪ ಸಂಖ್ಯಾತರು ಕಾಂಗ್ರೆಸ್ ಜತೆಯಲ್ಲಿ ಇದ್ದರು. ಆದರೆ ಈಗ ಹಿಂದುಳಿದ ವರ್ಗದವರು ಮತ್ತು ದಲಿತರು ಶೇ.80ಕ್ಕೂ ಅಧಿಕ ಸಂಖ್ಯೆಯಲ್ಲಿ ಬಿಜೆಪಿ ಜತೆ ಇದ್ದಾರೆ. ಹಾಗೆಯೇ ರಾಷ್ಟ್ರೀಯವಾದಿ ಮುಸಲ್ಮಾನರು ಕೂಡ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾ ಬುಧವಾರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಮುಖಂಡರು ಅಭಿವೃದ್ದಿ ಕೇಂದ್ರಿಕರಿಸಿ ಮಾತನಾಡುವುದಿಲ್ಲ ಜಾತಿವಾದಿ ಮತಗಳ ಲೆಕ್ಕಚಾರದಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ದಿ ಕಾರ್ಯಗಳು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಡಿರುವ ಒಳ್ಳೆ ಕೆಲಸಗಳಿಗೆ ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡುತ್ತಿರುವ ಉತ್ತಮ ಕಾರ್ಯಗಳನ್ನು ಮೆಚ್ಚಿ ಜನರು ಬಿಜೆಪಿಗೆ ವೋಟ್ ಹಾಕುತ್ತಾರೆ.ಪ್ರಧಾನಿ ನರೇಂದ್ರ ಮೋದಿ ಯಾವ ಜಾತಿ, ಸಿಎಂ ಬೊಮ್ಮಾಯಿ ಯಾವ ಜಾತಿ, ಶಾಸಕ ಯಾವ ಜಾತಿ ಎಂದು ನೋಡಿ ಮತಹಾಕುವುದಿಲ್ಲ ಎಂದರು.
ಕುರುಬರ ವೋಟ್ ಪಡೆಯಲು ಅಲ್ಲ:
ರಾಜ್ಯದಲ್ಲಿ ಹಲವು ಸರ್ಕಾರಗಳು ಆಡಳಿತ ನಡೆಸಿವೆ.ಆದರೆ ಕನಕದಾಸ, ಸಂಗೊಳ್ಳಿ ರಾಯಣ್ಣ ಅವರನ್ನು ನೆನಪಿಸಲು ಬಿಜೆಪಿ ಅಧಿಕಾರಕ್ಕೆ ಬರಬೇಕಾಯಿತು. ಕನಕಸದಾಸರ ಜಯಂತಿ ಆಚರಣೆ ಹಾಗೂ ಸರ್ಕಾರಿ ರಜೆ ಘೋಷಣೆ ಮಾಡಿದ್ದು ಕುರುಬರ ವೋಟ್ ಪಡೆಯಲು ಅಲ್ಲ.ಬದಲಾಗಿ ಕನಕದಾಸರ ತತ್ವ ಸಿದ್ದಾಂತಗಳನ್ನು ಜನರಿಗೆ ತಲುಪಿಸುವುದಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ದಲಿತ ಮತ್ತು ಹಿಂದುಳಿದ ಸಮುದಾಯದ 47 ಮಂದಿಗೆ ತಮ್ಮ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಆ ಮೂಲಕ ದಲಿತ ಮತ್ತು ಹಿಂದುಳಿದ ವರ್ಗಗಳ ಏಳ್ಗೆಗೆ ಆದ್ಯತೆ ನೀಡಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿಂದುಳಿದ ವರ್ಗದವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು ಅವುಗಳನ್ನು ತಲುಪಿಸುವ ಕೆಲಸ ಮಾಡೋಣ ಎಂದು ಹೇಳಿದರು.
ಇದನ್ನೂ ಓದಿ:ವರ್ಷಾಂತ್ಯಕ್ಕೆ ಮದುವೆಯಾಗಲಿದ್ದಾರಾ ಕತ್ರಿನಾ ಕೈಫ್, ವಿಕ್ಕಿ ಕೌಶಲ್?!
ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ಮಠ ಮಾನ್ಯಗಳಿಗೆ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತಷ್ಟು ಅನುದಾನ ನೀಡಲಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಮೋರ್ಚಾದ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಹಿಂದುಳಿದ ವರ್ಗಗಳ ಅಭಿವೃದ್ದಿಯಾಗಿಲ್ಲ.ಇದಕ್ಕೆ ನಮ್ಮನ್ನಾಳಿದ ಸರ್ಕಾರಗಳೆ ಕಾರಣ ಎಂದರು. ಬಿಜೆಪಿಯ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಎ ಸುವರ್ಣ, ವಿಧಾನ ಪರಿಷತ್ತಿನ ಸದಸ್ಯ ರಘುನಾಥ್ ಮಲ್ಕಾಪುರೆ, ಮಾಜಿ ಸಂಸದ ವೀರೂಪಾಕ್ಷಪ್ಪ, ವಿಜಯಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಂಬಳಿ ಬಗ್ಗೆ ಇದ್ದಕ್ಕಿದ್ದ ಹಾಗೆ ನೆನಪು ಏಕೆ?
ಕೆಲವರಿಗೆ ಕಂಬಳಿ ಬಗ್ಗೆ ಇದ್ದಕ್ಕಿದ್ದ ಹಾಗೆ ನೆನಪಾಗಿದೆ.ಈಗಾಗಲೇ ಹಿಂದುಳಿದ ವರ್ಗದವರು ಕೈ ಕೊಟ್ಟಿದ್ದಾರೆ.ಕುರುಬರು ಕೈ ಬಿಡುತ್ತಾರೆ, ಅವರು ಉಳಿದು ಕೊಳ್ಳಲಿ ಎಂಬ ಕಾರಣದಿಂದಾಗಿ ಈಗ ಕಂಬಳಿ ಹೆಸರು ಶುರುಮಾಡಿದ್ದಾರೆ ಎಂದು ಸಚಿವ ಈಶ್ವರಪ್ಪ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿದೆ ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಬ್ಬೆಟ್ಟಿನ ಗಿರಾಕಿ ಅನ್ನುತ್ತಾರೆ ಮಾಜಿ ಮುಖ್ಯಮಂತ್ರಿ ಆದವರು ಈ ರೀತಿ ವಯಕ್ತಿ ಮಟ್ಟದ ಆರೋಪ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.